Chikkaballapur News: ಗ್ರಾಮೀಣ ಜನತೆಗೆ ಕಾನೂನು ಅರಿವು ಅಗತ್ಯ

ಟ್ರಸ್ಟ್ ವತಿಯಿಂದ ಹಮ್ಮಿ ಕೊಂಡಿದ್ದ ಕಾನೂನು ಅರಿವು ಮತ್ತು ಸರ್ಕಾರದ ಕಲ್ಯಾಣ ಕಾಯ ಕ್ರಮಗಳ ಅರಿವು ಕಾರ್ಯಾಗಾರವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾ ಡಿದರು.

Chkkaballapur New
Profile Ashok Nayak January 18, 2025

Source : Chikkaballapur Reporter

ಕಾನೂನು ಅರಿವು ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಟ್ರಸ್ಟ್ ನಿರ್ದೇಶಕಿ ಚಿತ್ರಾವತಿ ಅಭಿಮತ

ಫಲಾನುಭವಿಗೆ ಸೌಲಭ್ಯ ತಲುಪಿಸಿ

ಗೌರಿಬಿದನೂರು ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರು, ಸಾಮಾಜಿಕ ಭದ್ರತೆ, ಪರಿಸರ, ಶಾಲೆ ಆರೋಗ್ಯಕ್ಕೆ ಸಂಬಂಧಪಟ್ಟಂತೆ ವೈಯಕ್ತಿಕಮತ್ತು ಸಮುದಾಯದ ಸೌಲಭ್ಯ ಮತ್ತು ಕಾನೂನುಗಳ ಬಗ್ಗೆ ಅರಿವು ಮೂಡಿಸುವುದೇ ಕಾನೂನಿನ ಅರಿವು ನೆರವು ಕಾರ್ಯ ಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಂಸ್ಥೆ ಟ್ರಸ್ಟ್‌ ನಿರ್ದೇಶಕಿ ಚಿತ್ರಾವತಿ ಹೇಳಿದರು.

ತಾಲ್ಲೂಕಿನ ರಮಾಪುರ ಗ್ರಾಮದ ಪಂಚಾಯಿತಿ ಆವರಣದಲ್ಲಿ ಟ್ರಸ್ಟ್ ವತಿಯಿಂದ ಹಮ್ಮಿ ಕೊಂಡಿದ್ದ ಕಾನೂನು ಅರಿವು ಮತ್ತು ಸರ್ಕಾರದ ಕಲ್ಯಾಣ ಕಾಯ ಕ್ರಮಗಳ ಅರಿವು ಕಾರ್ಯಾಗಾರವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಸೌಲಭ್ಯ ತಲುಪಿಸುವ ಕಾರ್ಯ: ಸರ್ಕಾರ ಯೋಜನೆಗಳಾದ ಲೇಬರ್‌ ಕಾರ್ಡ್, ಆಯು ಷ್ಮಾನ್ ಕಾರ್ಡ್, ಗೌರಿಬಿದನೂರು ತಾಲೂಕಿನ ರಮಾಪುರದಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಆಯುಷ್ಮಾನ್ ಕಾರ್ಡ್, ಪಿಂಚಣಿ ಕಾರ್ಡ್ ಗಳನ್ನು ವಿತರಿಸಲಾಯಿತು.

ಪಿಂಚಣಿ, ನರೇಗಾ, ಜಾಬ್‌ ಕಾರ್ಡ್ ಹಾಗೂ ಭೂಮಿಗೋಸ್ಕರ ನಮೂನೆ 53 ಮತ್ತು 57ರಲ್ಲಿ ಅರ್ಜಿ ಹಾಕಿರುವ ಅರ್ಹ ಫಲನುಭವಿಗಳಿಗೆ ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೇ ಸರ್ಕಾರದ ಸೌಲಭ್ಯಗಳನ್ನು ಮನೆ ಬಾಗಿಲಿಗೆ ತಲುಪಿಸುವ ಪ್ರಯತ್ನ ಮಾಡಲಾಗುತ್ತಿದೆ, ಇದಕ್ಕೋಸ್ಕರತಾಲ್ಲೂಕಿನಲ್ಲಿ 300 ಜನಕಾಯ ಕ ಬಂಧುಗಳಿಗೆ ತಾಲ್ಲೂಕು ಪಂಚಾಯಿತಿ ಯಲ್ಲಿ ತರ ಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.

ಗ್ರಾಮೀಣ ಭಾಗದ ಅನೇಕರಲ್ಲಿ ಆಸ್ತಿ ಜಂಜಾಟ, ಕೌಟುಂಬಿಕ ಕಲಹಸೇರಿದಂತೆ ಇನ್ನಿತರ ಸಮಸ್ಯೆ ಗಳಿರುತ್ತವೆ. ಕಾನೂನಿನ ಅರಿವು ಇಲ್ಲದ ಕಾರಣಕ್ಕೆ ಕೆಲಮೊಮ್ಮೆ ಕಲಹಗಳು ವಿಕೋಪಕ್ಕೆ ಹೋಗಿ ಕೋರ್ಟ್, ಕಚೇರಿ ಅಲೆಯುವಪರಿಸ್ಥಿತಿ ಉಂಟಾಗುತ್ತವೆ. ಇಂತಹ ಘಟನೆಗಳನ್ನು ತಪ್ಪಿಸಲು ಈ ಕಾರ್ಯಕ್ರಮದ ಮೂಲಕ ಜನರಿಗೆ ಕಾನೂನಿನ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ಮಹಿಳೆಯರಿಗೆ ಸೌಲಭ್ಯಗಳ ಮಾಹಿತಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿ ಚಾರಕಿ ಪಾರಿಜಾತ ಮಾತನಾಡಿ, ಬಾಲ್ಯ ವಿವಾಹ, ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟುವುದು, ಸೇರಿದಂತೆ ಗರ್ಭಿಣಿಯರಿಗೆ ಮತ್ತು ಮಕ್ಕಳಿಗೆ ಸಿಗುವ ಸರ್ಕಾರದ ಹಲವು ಸೌಲಭ್ಯಗಳ ಬಗ್ಗೆ ತಿಳಿಸಿದರು.

ಕೃಷಿ ಇಲಾಖೆಯ ಮೈಲಾರಪ್ಪ ಮಾತನಾಡಿ, ಸರ್ಕಾರದಿಂದನೀರಿನ ಮಿತತೆ ಬಳಕೆಗೆ ಸರ್ಕಾರದಿಂದ ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಗಳಲ್ಲಿ ಯಾವ ಸೌಲಭ್ಯಗಳು ಲಭ್ಯ ವಿದೆ, ಹಾಗೂ ರೈತರು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಆಯುಷ್ಮಾನ್ ಕಾರ್ಡ್, ಪಿಂಚಣಿ ಕಾರ್ಡ್‌ಗಳನ್ನು ವಿತರಣೆ ಮಾಡಲಾಯಿತು. ಸಮಾರಂಭದಲ್ಲಿ ಪಂಚಾಯಿತಿ ಅಧ್ಯಕ್ಷೆ ನಾಗಮಣಿ, ಬಾಲ ಗಂಗಾಧರ್, ವೆಂಕಟೇಶ್ ನಾಯಕ್, ಮಯೂರ್, ಬಸವರಾಜು, ಸ್ವಾತಿ ಹಾಗೂ ಗ್ರಾಮಸ್ಥರು ಪಾಲ್ಗೊಂ ಡಿದ್ದರು.

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ