ಯೆಲ್ಲೋ ಅಲರ್ಟ್; ಇಂದು ಉತ್ತರ, ದಕ್ಷಿಣ ಒಳನಾಡಿನಲ್ಲಿ ಮಳೆ ಅಬ್ಬರ ಸಾಧ್ಯತೆ!
ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 26°C ಮತ್ತು 20°C ಇರುವ ಸಾಧ್ಯತೆ ಇದೆ.