ಟ್ರ್ಯಾಕ್ಟರ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿಗೆ ಗಂಭೀರ ಗಾಯ
Tractor accident: ಚಿಕ್ಕಮಗಳೂರು ಕೊಪ್ಪ ತಾಲೂಕಿನ ತೀರ್ಥಕೆರೆ ಬಳಿ ಭಾನುವಾರ ರಾತ್ರಿ ಅಪಘಾತ ನಡೆದಿದೆ. 40 ಕಾರ್ಮಿಕರು ಕೆಲಸ ಮುಗಿಸಿಕೊಂಡು ಟ್ರ್ಯಾಕ್ಟರ್ನಲ್ಲಿ ವಾಪಸ್ ಊರಿಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾಗಿದ್ದು, ಈ ವೇಳೆ 10ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಗಾಯಗೊಂಡಿದ್ದಾರೆ.