ಮಂತ್ರಾಲಯಕ್ಕೆ ತೆರಳುತ್ತಿದ್ದ ಟಿಟಿ ವಾಹನ ಪಲ್ಟಿ; 10 ಮಂದಿಗೆ ಗಾಯ
Challakere News: ಚಾಮರಾಜನಗರದಿಂದ ಮಂತ್ರಾಲಯಕ್ಕೆ ಪ್ರವಾಸಿಗರು ಟಿಟಿ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಚಳ್ಳಕೆರೆ ತಾಲೂಕಿನ ಕೋಡಿಹಳ್ಳಿ ಬ್ರಿಡ್ಜ್ ಬಳಿ ವಾಹನ ಸಾಗುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ.