ಹರೀಶ್ ರಾಯ್ ಅಂತಿಮ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್
ಹರೀಶ್ ರಾಯ್ ಇತ್ತೀಚೆಗೆ ಥೈರಾಯ್ಡ್ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಕೆಜಿಎಫ್ (KGF Movie) ಚಿತ್ರದ ನಂತರ ಕ್ಯಾನ್ಸರ್ ಕಾಯಿಲೆ ಕಾಣಿಸಿಕೊಂಡಿದ್ದು, ಮೂರ್ನಾಲ್ಕು ವರ್ಷದಿಂದ ಕ್ಯಾನ್ಸರ್ಗೆ (Cancer) ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ಮರಳಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಯಶ್ ಅವರು ಚಾಚಾ ಹರೀಶ್ ರಾಯ್ (Harish Rai) ಅಂತಿಮ ದರ್ಶನ ಪಡೆದಿದ್ದಾರೆ.