Friday, 13th December 2024

ಫೆ.16, 17ಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್’ಗೆ ಸಂತಸದ ದಿನ…!

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಫೆ.16ರಂದು 47ನೇ ವಸಂತಕ್ಕೆ ಕಾಲಿಡುತ್ತಿದ್ದು, ಅಭಿಮಾನಿಗಳು ವಿವಿಧ ರೀತಿಯಲ್ಲಿ ಅವರ ಹುಟ್ಟುಹಬ್ಬ ವನ್ನು ಸಂಭ್ರಮಿಸಲು ಸಿದ್ದರಾಗಿದ್ದಾರೆ.

ಸ್ಯಾಂಡಲ್ ವುಡ್ ನಲ್ಲಿ ಇಪ್ಪತ್ತೈದು ವರ್ಷ ಪೂರೈಸಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗಾಗಿ ಫೆ.17ಕ್ಕೆ ರಜತ ಮಹೋತ್ಸವ ಕಾರ್ಯಕ್ರಮ ಆಯೋಜಿಸಿದ್ದಾರೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಸಂಜೆ ಐದು ಗಂಟೆಗೆ ಕಾರ್ಯಕ್ರಮ ಪ್ರಾರಂಭಿಸಲಿದ್ದು, ಬಿಜೆಪಿ ನಾಯಕ ಸಚ್ಚಿದಾನಂದ ಅವರು ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಳೆದ ಡಿಸೆಂಬರ್ ನಲ್ಲಿ ಬಿಡುಗಡೆಯಾಗಿದ್ದ ದರ್ಶನ್ ಅವರ ‘ಕಾಟೇರ’ ಭರ್ಜರಿ ಯಶಸ್ಸು ಕಂಡಿದ್ದು, ಅವರ ಮುಂದಿನ ಚಿತ್ರ ‘ರಾಜ ವೀರ ಮದಕರಿ ನಾಯಕ’ ಮೇಲೆ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿದೆ.