Sunday, 15th December 2024

ದರ್ಶ‌ನ್‌’ಗೆ 25 ಕೋ. ರೂ. ವಂಚನೆ ಯತ್ನ: ಮಹಿಳೆ ಬಂಧನ

ಮೈಸೂರು: ನಟ ದರ್ಶನ್ ಅವರಿಗೆ 25 ಕೋಟಿ ರೂಪಾಯಿ ವಂಚನೆ ಮಾಡಲು ಮುಂದಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.

ಬ್ಯಾಂಕ್ ಮ್ಯಾನೇಜರ್ ಎಂದು ಹೇಳಿಕೊಂಡು ದರ್ಶನ್ ಭೇಟಿಗೆ ಬಂದಿದ್ದ ಅರುಣಕುಮಾರಿ ಎಂಬ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ದರ್ಶನ್ ಸ್ನೇಹಿತರು ಮೈಸೂರಿನ ಹೆಬ್ಬಾಳ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದ್ದರು.

ಮೈಸೂರಿನ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ, ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬೆಂಗಳೂರು ಮೂಲದ ಅರುಣ ಕುಮಾರಿ, ಮಧುಕೇಶವ ಮತ್ತು ನಂದೀಶ್ ಆರೋಪಿಗಳಾಗಿದ್ದು, ದರ್ಶನ್ ಸ್ನೇಹಿತ ಹರ್ಷ ಅವರು ದೂರು ನೀಡಿದ್ದಾರೆ.

ಬೆಂಗಳೂರಿನ ಸೌತ್ ಎಂಡ್ ಸರ್ಕಲ್ ನಲ್ಲಿರುವ ಕೆನರಾ ಬ್ಯಾಂಕ್ ಸಿಬ್ಬಂದಿ ಎಂದು ಹೇಳಿಕೊಂಡಿದ್ದ ಆರೋಪಿಗಳು ನಕಲಿ ದಾಖಲೆ ಸೃಷ್ಠಿಸಿ ದರ್ಶನ್ ಶ್ಯೂರಿಟಿ ಯೊಂದಿಗೆ ಸ್ನೇಹಿತರ ಹೆಸರಲ್ಲಿ 25 ಕೋಟಿ ರೂ. ಸಾಲ ಪಡೆದು ವಂಚಿಸಲು ಯತ್ನಿಸಿದ್ದರೆನ್ನಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಎಸಿಪಿ ಕಚೇರಿಗೆ ಆಗಮಿಸಿದ ದರ್ಶನ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.