45 Movie: ಬಹು ನಿರೀಕ್ಷಿತ ಮಲ್ಟಿಸ್ಟಾರರ್ ʼ45ʼ ಚಿತ್ರದ ಟೀಸರ್ ರಿಲೀಸ್ ಡೇಟ್ ಅನೌನ್ಸ್
45 Movie: ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ. ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ʼ45ʼ ಚಿತ್ರದ ಮಾರ್ಚ್ 30 ರಂದು ವಸಂತ ಋತುವಿನ ಮೊದಲ ದಿನ, ಯುಗಾದಿ ಹಬ್ಬದ ಶುಭದಿನದಂದು ಅನಾವರಣವಾಗಲಿದೆ. ಈ ಕುರಿತ ವಿವರ ಇಲ್ಲಿದೆ.


ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ. ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಅವರು ತಮ್ಮ ʼಸೂರಜ್ ಪ್ರೊಡಕ್ಷನ್ʼ ಬ್ಯಾನರ್‌ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹುನಿರೀಕ್ಷಿತ ಮಲ್ಟಿಸ್ಟಾರರ್ ʼ45ʼ ಚಿತ್ರ (45 Movie) ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚಿಗೆ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯನ್ನು ಸಹ ವಿಭಿನ್ನವಾಗಿ ಮಾಡಲಾಗಿತ್ತು. ಆಗಸ್ಟ್ 15 ರಂದು ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವ ಈ ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಮಾರ್ಚ್ 30, ವಸಂತ ಋತುವಿನ ಮೊದಲ ದಿನ, ಯುಗಾದಿ ಹಬ್ಬದ ಶುಭದಿನದ ಸಂಜೆ 6.45ಕ್ಕೆ ʼ45ʼ ಚಿತ್ರದ ಟೀಸರ್ ಅನಾವರಣವಾಗಲಿದೆ.
ಈ ಸುದ್ದಿಯನ್ನೂ ಓದಿ | Star Fashion: ಕೊರಿಯನ್ ಫ್ಯಾಷನ್‌ವೇರ್‌ನಲ್ಲಿ ಕಿರುತೆರೆ ನಟಿ ಸುಕೃತಾ ನಾಗ್ ಕ್ಯೂಟ್ ಲುಕ್!
ಶಿವರಾಜಕುಮಾರ್, ಉಪೇಂದ್ರ, ರಾಜ್ ಬಿ. ಶೆಟ್ಟಿ ಅವರಂತಹ ಅದ್ಭುತ ಕಲಾವಿದರ ಅಭಿನಯ, ಸಂಗೀತ ನಿರ್ದೇಶನದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಅರ್ಜುನ್ ಜನ್ಯರ ಮೊದಲ ನಿರ್ದೇಶನ ಹಾಗೂ ಸದಭಿರುಚಿಯ ಚಿತ್ರಗಳ ನಿರ್ಮಾಣಕ್ಕೆ ಹೆಸರಾಗಿರುವ ರಮೇಶ್ ರೆಡ್ಡಿ ಅವರ ನಿರ್ಮಾಣವಿರುವ ಈ ಚಿತ್ರದಲ್ಲಿ ಇಲ್ಲಿನ ನುರಿತ ತಂತ್ರಜ್ಞರ ಜತೆಗೆ ಹಾಲಿವುಡ್‌ನ ಪ್ರಸಿದ್ದ ತಂತ್ರಜ್ಞರು ಕಾರ್ಯ ನಿರ್ವಹಿಸಿದ್ದಾರೆ. ಒಟ್ಟಿನಲ್ಲಿ ಸಾಕಷ್ಟು ವಿಶೇಷಗಳನ್ನೊಳಗೊಂಡಿರುವ ʼ45ʼ ಚಿತ್ರದ ಟೀಸರ್ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.