Actor Darshan: ಕೇರಳದ ಪ್ರಸಿದ್ಧ ದೇಗುಲಕ್ಕೆ ನಟ ದರ್ಶನ್ ಭೇಟಿ; ಶತ್ರು ಸಂಹಾರಕ್ಕಾಗಿ ವಿಶೇಷ ಪೂಜೆ
Actor Darshan: ಕೇರಳದಲ್ಲಿ ಶತ್ರು ಸಂಹಾರ ಪೂಜೆಗೆ ಪ್ರಸಿದ್ಧಿಯಾಗಿರುವ ದೇಗುಲಕ್ಕೆ ನಟ ದರ್ಶನ್ ತೆರಳಿದ್ದಾರೆ. ಹಲವು ರಾಜಕಾರಣಿಗಳು ಶತ್ರು ಸಂಹಾರ ಪೂಜೆ ಮಾಡಿಸಲು ಇಲ್ಲಿಗೆ ತೆರಳುತ್ತಾರೆ. ಹೀಗಾಗಿ ನಟ ದರ್ಶನ್ ಕುಟುಂಬ ಸಮೇತ ಈ ದೇಗುಲಕ್ಕೆ ತೆರಳಿದ್ದು, ಶತ್ರು ಸಂಹಾರ ಪೂಜೆ ಮಾಡಿಸಿದ್ದಾರೆ ಎನ್ನಲಾಗಿದೆ.


ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಬಿಡುಗಡೆಯಾದ ನಂತರ ನಟ ದರ್ಶನ್ ಅವರು ಹೊರಗೆಲ್ಲೂ ಹೆಚ್ಚಾಗಿ ಕಾಣಿಸಿಕೊಂಡಿರಲಿಲ್ಲ. ಚಿತ್ರರಂಗಕ್ಕೆ ಕಮ್ ಬ್ಯಾಕ್ ತಯಾರಿಯಲ್ಲಿರುವ ದರ್ಶನ್ ಇದೀಗ, ಕುಟುಂಬದ ಜತೆ ಕೇರಳದ ಪ್ರಸಿದ್ಧ ದೇವಾಲಯದಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಕೇರಳದ ಕಣ್ಣೂರಿನ ಪುರಾಣ ಪ್ರಸಿದ್ಧ ಮಡಾಯಿ ಶ್ರೀ ತಿರುವರ್ಕ್ಕಾಟ್ಟು ಕಾವು ಭಗವತಿ ದೇವಸ್ಥಾನಕ್ಕೆ ದರ್ಶನ್ (Actor Darshan) ಭೇಟಿ ನೀಡಿದ್ದು, ಶತ್ರು ಸಂಹಾರ ಪೂಜೆ ಮಾಡಿಸಿ ದೇವರ ದರ್ಶನ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಕೇರಳದ ಈ ದೇಗುಲ ಶತ್ರು ಸಂಹಾರ ಪೂಜೆಗೆ ಪ್ರಸಿದ್ಧಿಯಾಗಿದೆ. ಹಲವು ರಾಜಕಾರಣಿಗಳು ಶತ್ರು ಸಂಹಾರ ಪೂಜೆ ಮಾಡಿಸಲು ಇಲ್ಲಿಗೆ ತೆರಳುತ್ತಾರೆ. ಹೀಗಾಗಿ ನಟ ದರ್ಶನ್ ಕುಟುಂಬ ಸಮೇತ ಈ ದೇಗುಲಕ್ಕೆ ತೆರಳಿದ್ದು, ಶತ್ರು ಸಂಹಾರ ಪೂಜೆ ಮಾಡಿಸಿದ್ದಾರೆ ಎನ್ನಲಾಗಿದೆ.
ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ದರ್ಶನ್ ಜೈಲಿನಲ್ಲಿದ್ದಾಗ, ಜಾಮೀನಿನ ಮೇಲೆ ಹೊರಗಡೆ ಬಂದ ಮೇಲೆ ಹಲವು ದೇವಾಲಯಕ್ಕೆ ಭೇಟಿ ನೀಡಿದ್ದರು. ಇದೀಗ ಕೇರಳದ ಕಣ್ಣೂರಿನ ಮಾಡಾಯಿಕಾವು ದೇವಸ್ಥಾನದಲ್ಲಿ ಪತ್ನಿ ವಿಜಯಲಕ್ಷ್ಮಿ, ಮಗ ಹಾಗೂ ನಟ ಧನ್ವೀರ್ ಜೊತೆ ವಿಜಯಲಕ್ಷ್ಮಿ ಅವರು ತೆರಳಿದ್ದಾರೆ.
ಈ ದೇವಸ್ಥಾನದ ವಿಶೇಷ ಏನೆಂದರೆ ಹಿಂದಿನ ಕಾಲದ ರಾಜರು ರಾಜ್ಯ ರಕ್ಷಣೆಗೋಸ್ಕರ ತಾಂತ್ರಿಕ ಹಾಗೂ ಮಾಂತ್ರಿಕ ಶಕ್ತಿಗಾಗಿ ಈ ದೇಗುಲದ ಮೊರೆ ಹೋಗುತ್ತಿದ್ದರು. ಇಲ್ಲಿ ದೇವಿ ಕಾಳಿಯನ್ನು ಆರಾಧನೆ ಮಾಡುವುದೇ ವಿಶೇಷ. ಇಲ್ಲಿ ನಡೆಯುವ ಪೂಜೆಗಳು ಬಹಳಷ್ಟು ರಹಸ್ಯವಾಗಿರುತ್ತದೆ. ಇಲ್ಲಿ ಪೂಜೆ ಮಾಡಿದರೆ ಶತ್ರು ಸಂಹಾರವಾಗಲಿದೆ ಎಂದು ಹಲವು ಭಕ್ತರು ನಂಬಿದ್ದಾರೆ.
ಈ ಸುದ್ದಿಯನ್ನೂ ಓದಿ | Mylapura Movie: ʼಮೈಲಾಪುರʼ ಚಿತ್ರತಂಡದಿಂದ ಶಂಕರ್ ನಾಗ್, ಪುನೀತ್ ರಾಜಕುಮಾರ್ ಅವರ ವಿಶೇಷ ಪೋಸ್ಟರ್ ರಿಲೀಸ್
ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್‌ಗೆ (Actor Darshan) ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನು ರದ್ದು ಕೋರಿ ಪೊಲೀಸ್ ಇಲಾಖೆ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ಸಮ್ಮತಿಸಿತ್ತು. ಏಪ್ರಿಲ್ 2 ರಂದು ಅರ್ಜಿ ವಿಚಾರಣೆ ನಡೆಯಲಿದೆ. ಪ್ರಕರಣದ ಎ2 ಆರೋಪಿ ನಟ ದರ್ಶನ್ ಸೇರಿ ಪ್ರಮುಖ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಈ ಜಾಮೀನು ಆದೇಶ ಪ್ರಶ್ನಿಸಿ ಪೊಲೀಸರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಏಪ್ರಿಲ್ 2 ರಂದು ನಟ ದರ್ಶನ್ ಮತ್ತು ಗ್ಯಾಂಗ್‌ನ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಗೃಹ ಇಲಾಖೆ ಕಾನೂನು ತಜ್ಞರ ಅಭಿಪ್ರಾಯ ಪಡೆದು ಮೇಲ್ಮನವಿ ಸಲ್ಲಿಸಲು ಪೊಲೀಸ್ ಇಲಾಖೆಗೆ ಅನುಮತಿ ನೀಡಿದ್ದರಿಂದ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು.
ಡಿಸೆಂಬರ್ ತಿಂಗಳಲ್ಲಿ ಹೈಕೋರ್ಟ್ ರೇಣುಕಾ ಸ್ವಾಮಿ ಕೊಲೆ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಇನ್ನಿತರ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು. ಪೊಲೀಸ್ ಇಲಾಖೆಯು ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯ ವಿಚಾರಣೆ ಈವರೆಗೆ ನಡೆದಿರಲಿಲ್ಲ. ಇದೀಗ ಜಾಮೀನು ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸುವಂತೆ ವಕೀಲ ವಕೀಲ ಅನಿಲ್ ಕುಮಾರ್ ನಿಶಾನಿ ಮನವಿ ಮಾಡಿದ್ದರು.
ವಕೀಲ ಅನಿಲ್ ಕುಮಾರ್ ನಿಶಾನಿ ಅವರ ಮನವಿಗೆ ಸ್ಪಂದಿಸಿದ್ದ ಸುಪ್ರೀಂಕೋರ್ಟ್ ಏಪ್ರಿಲ್ 2 ರಂದು ಅರ್ಜಿಯ ವಿಚಾರಣೆ ನಡೆಸುವುದಾಗಿ ತಿಳಿಸಿತ್ತು.