Sunday, 15th December 2024

ಹಿರಿಯ ನಟ ಪ್ರಕಾಶ್ ರಾಜ್’ಗೆ ಗಂಭೀರ ಗಾಯ

ಹೈದರಾಬಾದ್: ಸಿನಿಮಾ ಶೂಟಿಂಗ್ ವೇಳೆ ಬಿದ್ದು ಹಿರಿಯ ನಟ ಪ್ರಕಾಶ್ ರಾಜ್ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸ್ಯಾಂಡಲ್ ವುಡ್ ಸಿನಿಮಾ ಲವ್ ಯೂ ರಚ್ಚು ಚಿತ್ರದ ಚಿತ್ರೀಕರಣದ ವೇಳೆ ನಡೆದ ದುರಂತದ ಬೆನ್ನಲ್ಲೇ ಈ ಘಟನೆ ನಡೆದಿದೆ.

ಧನುಷ್ ಅಭಿನಯದ ಸಿನಿಮಾ ಚಿತ್ರೀಕರಣದ ವೇಳೆ ಅವಘಡ ಸಂಭವಿಸಿದೆ. ಸಾಹಸ ದೃಶ್ಯ ಚಿತ್ರೀಕರಿಸುವ ವೇಳೆ ನಟ ಪ್ರಕಾಶ್ ಅವರ ಕೈಗೆ ಗಂಭೀರ ಗಾಯ ಗಳಾಗಿದ್ದು, ಚಿಕಿತ್ಸೆಗಾಗಿ ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಕುರಿತು ನಟ ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದು, ಶೂಟಿಂಗ್ ವೇಳೆ ಬಿದ್ದು ಸಣ್ಣ ಪೆಟ್ಟಾಗಿದೆ. ಶಸ್ತ್ರಚಿಕಿತ್ಸೆಗಾಗಿ ಡಾ.ಗುರುವರೆಡ್ಡಿ ಬಳಿ ತೆರಳುತ್ತಿದ್ದೇನೆ. ಬೇಗ ಗುಣಮುಖನಾಗುತ್ತೇನೆ. ಅಭಿಮಾನಿಗಳು ಆತಂಕ ಪಡಬೇಕಾಗಿಲ್ಲ ಎಂದಿದ್ದಾರೆ.