Sunday, 15th December 2024

ನಟ ಸತ್ಯಜಿತ್ ಆರೋಗ್ಯ ಮತ್ತಷ್ಟು ಕ್ಷೀಣ

ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟ ಸತ್ಯಜಿತ್ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ ಎನ್ನಲಾ ಗಿದೆ. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸತ್ಯಜಿತ್ ಅವರ ಆರೋಗ್ಯದಲ್ಲಿ ಮತ್ತಷ್ಟು ಗಂಭೀರವಾಗಿದೆ. ಗುರುವಾರ ಡಯಾಲಿಸೀಸ್ ಮಾಡುವಾಗ ಹಾರ್ಟ್ ರೇಟ್ ಕಡಿಮೆಯಾಗಿದೆ. ಮತ್ತೆ ವೆಂಟಿಲೇಟರ್ ಸಪೋರ್ಟ್ ನೀಡಲಾಗಿದೆ. ಶುಕ್ರವಾರದಿಂದ ಮತ್ತೆ ಆರೋಗ್ಯ ಕ್ಷೀಣಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಗ್ಯಾಂಗ್ರಿನ್‌ನಿಂದಾಗಿ ಅವರ ಒಂದು ಕಾಲನ್ನು ಕತ್ತರಿಸಲಾಗಿತ್ತು. ಈಗ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ತೀವ್ರ ಅನಾರೋಗ್ಯ ನಟ ಸತ್ಯಜಿತ್ ಅವರನ್ನು ಬಾಧಿಸುತ್ತಿದೆ.