Thursday, 12th December 2024

ಉಸಿರಾಟದ ಸಮಸ್ಯೆ: ನಟ ವಿಜಯಕಾಂತ್ ಖಾಸಗಿ ಆಸ್ಪತ್ರೆಗೆ ದಾಖಲು

ಚೆನ್ನೈ : ದೇಸಿಯಾ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಸ್ಥಾಪಕ, ನಟ ವಿಜಯಕಾಂತ್ ಅವರು ಉಸಿರಾಟದ ಸಮಸ್ಯೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವಿಜಯಕಾಂತ್ ಅವರು ಬೆಳಿಗ್ಗೆ ಉಸಿರಾಟದ ಸಮಸ್ಯೆಗಳ ಬಗ್ಗೆ ದೂರಿದರು. ನಂತರ ಚೆನ್ನೈನ ಖಾಸಗಿ ಆಸ್ಪತ್ರೆಗೆ ಸಾಗಿಸಲಾ ಯಿತು.

ವೈದ್ಯರ ತಂಡವು ಅವರ ಆರೋಗ್ಯ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ.  ಒಂದೆರಡು ದಿನದಲ್ಲಿ ಡಿಸ್ಚಾರ್ಜ್ ಆಗುವ ನಿರೀಕ್ಷೆಯಿದೆ. ಸೆಪ್ಟೆಂಬರ್ ೨೦೨೦ ರಲ್ಲಿ, ವಿಜಯಕಾಂತ್ ಕರೋನಾ ವೈರಸ್ ಪಾಸಿಟಿವ್ ಪರೀಕ್ಷೆ ಮಾಡಿದ್ದರು. ಕೆಲ ದಿನಗಳ ಕಾಲ ಚಿಕಿತ್ಸೆ ಪಡೆದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.