Friday, 13th December 2024

ಸತತ 5 ಗಂಟೆ ವಿಚಾರಣೆ ಎದುರಿಸಿದ ಐಶ್ವರ್ಯ ರೈ

AishwaryaRai

ಮುಂಬೈ: ಬಾಲಿವುಡ್ ನಟಿ ಐಶ್ವರ್ಯ ರೈ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸತತ 5 ಗಂಟೆ ವಿಚಾರಣೆ ನಡೆಸಿದ್ದಾರೆ.

ಪನಾಮಾ ಪೇಪರ್ಸ್ ಸೋರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತಂಡ ನೋಟಿಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಐಶ್ವರ್ಯ ರೈ ಸೋಮವಾರ ಮುಂಬೈನ ಇಡಿ ಕಚೇರಿಗೆ ಆಗಮಿಸಿ ವಿಚಾರಣೆ ಎದುರಿಸಿದರು.

ಐಶ್ವರ್ಯ ರೈ ಕಳೆದ 15 ವರ್ಷಗಳಲ್ಲಿ ವಿದೇಶಿ ವಿನಿಮಯ ವಂಚಿಸಿದ್ದೂ ಅಲ್ಲದೇ, ತೆರಿಗೆ ವಂಚಿಸಿ ವಿದೇಶಗಳಲ್ಲಿ ಹೂಡಿಕೆ ಮಾಡಿದ್ದಾರೆ ಎಂದು ಪನಾಮಾ ಪೇಪರ್ಸ್ ನಲ್ಲಿ ಮಾಹಿತಿ ಹೊರಗೆ ಬಂದಿತ್ತು.

ವಿಚಾರಣೆ ವೇಳೆ ಬ್ರಿಟಿಷ್ ಮೂಲದ ಕಂಪನಿಯೊಂದರಲ್ಲಿ ಹಣ ಇರಿಸಿದ್ದಾರೆ ಎಂದು ಐಶ್ವರ್ಯ ಉತ್ತರ ನೀಡಿದ್ದಾರೆ ಎಂದು ಹೇಳಲಾಗಿದೆ. ಮಾವ ಹಾಗೂ ಹಿರಿಯ ನಟ ಅಮಿತಾಭ್ ಬಚ್ಚನ್ ಅವರಿಗೂ ಇಡಿ ನೋಟಿಸ್ ಜಾರಿ ಮಾಡಿತ್ತು.