Thursday, 12th December 2024

ನಟಿ ರಾಧಿಕಾ ಕುಮಾರಸ್ವಾಮಿ ವಿಚಾರಣೆ ಅಂತ್ಯ

ಬೆಂಗಳೂರು: ಆರೋಪಿ ಯುವರಾಜ್‌ ಖಾತೆಯಿಂದ ತಮ್ಮ ಖಾತೆಗೆ ಕೋಟಿ ಕೋಟಿ ಹಣ ವರ್ಗಾವಣೆ ಆಗಿದೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಶುಕ್ರವಾರ ಸಿಸಿಬಿ ಕಚೇರಿಯಲ್ಲಿ ವಿಚಾರಣೆ ಎದುರಿಸಿದ ನಟಿ ರಾಧಿಕಾ ಕುಮಾರಸ್ವಾಮಿ ಅವರ ಸತತ 4 ಗಂಟೆಗಳ ವಿಚಾರಣೆ ಅಂತ್ಯವಾಗಿದೆ.

ವಿಚಾರಣೆಯ ಬಳಿಕ ಮಾತನಾಡಿದ ರಾಧಿಕಾ ಕುಮಾರಸ್ವಾಮಿ, ‘ಅಧಿಕಾರಿಗಳು ವಿಚಾರಣೆಗೆ ಕರೆದಿದ್ದರು. ಸಧ್ಯ ವಿಚಾರಣೆ ಪೂರ್ಣಗೊಂಡಿದೆ. ಮತ್ತೆ ವಿಚಾರಣೆಗೆ ಕರೆದಿಲ್ಲ. ಇನ್ನು ನಾನು ಬೆಂಗಳೂರು ಬಿಟ್ಟು ಎಲ್ಲಿಗೂ ಹೋಗಲ್ಲ ಎಂದು ಸ್ಪಷ್ಟ ಪಡಿಸಿದರು.