Actress Radhika Narayan: 'ಮಹಾನ್' ಚಿತ್ರದ ಪ್ರಮುಖ ಪಾತ್ರದಲ್ಲಿ 'ರಂಗಿತರಂಗ' ಖ್ಯಾತಿಯ ನಟಿ ರಾಧಿಕಾ ನಾರಾಯಣ್
Mahaan Movie: ಇತ್ತೀಚೆಗಷ್ಟೇ ʼಮಹಾನ್ʼ ಚಿತ್ರದ ಶೀರ್ಷಿಕೆಯನ್ನು ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅನಾವರಣ ಮಾಡಿದ್ದರು. ನಟ ವಿಜಯ ರಾಘವೇಂದ್ರ ನಾಯಕರಾಗಿ ನಟಿಸುತ್ತಿರುವ 'ಮಹಾನ್; ಚಿತ್ರದ ಪ್ರಮುಖ ಪಾತ್ರದಲ್ಲಿ 'ರಂಗಿತರಂಗ' ಖ್ಯಾತಿಯ ರಾಧಿಕಾ ನಾರಾಯಣ್ ನಟಿಸುತ್ತಿದ್ದಾರೆ ಎಂಬ ಮಾಹಿತಿಯನ್ನು ಚಿತ್ರತಂಡ ಹಂಚಿಕೊಂಡಿದೆ.


ಬೆಂಗಳೂರು: ಕನ್ನಡದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಅವರು ನಿರ್ಮಿಸುತ್ತಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ವಿಜಯ ರಾಘವೇಂದ್ರ ನಾಯಕರಾಗಿ ನಟಿಸುತ್ತಿರುವ 'ಮಹಾನ್; ಚಿತ್ರದ ಪ್ರಮುಖ ಪಾತ್ರದಲ್ಲಿ 'ರಂಗಿತರಂಗ' ಖ್ಯಾತಿಯ ರಾಧಿಕಾ ನಾರಾಯಣ್ (Actress Radhika Narayan) ನಟಿಸುತ್ತಿದ್ದಾರೆ. ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ʼಮಹಾನ್ʼ ತಂಡಕ್ಕೆ ರಾಧಿಕಾ ನಾರಾಯಣ್ ಅವರಿಗೆ ಸ್ವಾಗತ ಕೋರಿದೆ.
ಈ ಬಗ್ಗೆ ನಟಿ ರಾಧಿಕಾ ನಾರಾಯಣ್ ಪ್ರತಿಕ್ರಿಯಿಸಿ, ʼಮಹಾನ್ʼ ರೈತರ ಕುರಿತಾದ ಚಿತ್ರ. ಈ ಚಿತ್ರದಲ್ಲಿ ನಟಿಸಲು ನನಗೆ ಬಹಳ ಸಂತೋಷವಾಗಿದೆ. ಪಿ.ಸಿ.ಶೇಖರ್ ಅವರ ನಿರ್ದೇಶನದಲ್ಲಿ ನನಗೆ ನಟಿಸಬೇಕೆಂಬ ಆಸೆಯಿತ್ತು. ಆದರೆ ಇಷ್ಟು ದಿನ ಅದು ಸಾಧ್ಯವಾಗಿರಲಿಲ್ಲ. ಈಗ ಅವರ ನಿರ್ದೇಶನದ ʼಮಹಾನ್ʼ ಚಿತ್ರದಲ್ಲಿ ನಟಿಸುತ್ತಿದ್ದೇನೆ. ಅದ್ಭುತ ನಟ ವಿಜಯ ರಾಘವೇಂದ್ರ ಅವರು ನಾಯಕನ್ನಾಗಿ ಹಾಗೂ ಪ್ರತಿಷ್ಠಿತ ವಿದ್ಯಾಸಂಸ್ಥೆ ನಡೆಸುತ್ತಿರುವ ಪ್ರಕಾಶ್ ಅವರು ನಿರ್ಮಾಣ ಮಾಡುತ್ತಿರುವ ಮತ್ತು ಸಾಮಾಜಿಕ ಕಳಕಳಿ ಹೊಂದಿರುವ ಈ ಚಿತ್ರದಲ್ಲಿ ಅಭಿನಯಿಸುತ್ತಿರುವುದು ಬಹಳ ಖುಷಿ. ಇನ್ನೂ ನಿರ್ದೇಶಕರು ಇದೊಂದು ರೈತರ ಕುರಿತಾದ ಚಿತ್ರ ಎಂದು ಹೇಳಿದ ತಕ್ಷಣ ನನಗೆ ಕಥೆ ಬಹಳ ಇಷ್ಟವಾಯಿತು. ನಾನು ಈ ಚಿತ್ರದಲ್ಲಿ ಹಳ್ಳಿಹುಡುಗಿಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ ಎಂದರು.
ನಿರ್ದೇಶಕ ಪಿ.ಸಿ.ಶೇಖರ್ ಮಾತನಾಡಿ, ಈ ಹಿಂದೆ ರಾಧಿಕಾ ನಾರಾಯಣ್ ಅವರ ಜತೆಗೆ ಎರಡು ಮೂರು ಕಥೆಗಳನ್ನು ಚರ್ಚಿಸಿದ್ದೆ. ಅದು ಆಗಿರಲಿಲ್ಲ. ಈಗ ನನ್ನ ನಿರ್ದೇಶನದ ʼಮಹಾನ್ʼ ಚಿತ್ರದಲ್ಲಿ ರಾಧಿಕಾ ನಾರಾಯಣ್ ಅವರು ನಟಿಸುತ್ತಿರುವುದು ಬಹಳ ಸಂತೋಷವಾಗಿದೆ. ಅವರ ಪಾತ್ರ ಕೂಡ ವಿಭಿನ್ನವಾಗಿರಲಿದೆ ಎಂದರು.

ನಮ್ಮ ಸಂಸ್ಥೆಯ ಮೊದಲ ನಿರ್ಮಾಣದ ಚಿತ್ರದಲ್ಲಿ ʼರಂಗಿತರಂಗʼ ಸೇರಿ ಕನ್ನಡದ ಅನೇಕ ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿರುವ ರಾಧಿಕಾ ಚೇತನ್ ಅವರು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿರುವುದು ಸಂತಸ ತಂದಿದೆ ಎಂದು ನಿರ್ಮಾಪಕ ಪ್ರಕಾಶ್ ಬುದ್ದೂರು ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ಈ ಚಿತ್ರದ ಶೀರ್ಷಿಕೆಯನ್ನು ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅನಾವರಣ ಮಾಡಿದ್ದರು.
ಈ ಸುದ್ದಿಯನ್ನೂ ಓದಿ | Kothalavadi Movie: 'ಕೊತ್ತಲವಾಡಿʼ ಟೈಟಲ್ ಟ್ರ್ಯಾಕ್ ರಿಲೀಸ್... ಯಶ್ ತಾಯಿ ನಿರ್ಮಾಣದ ಚಿತ್ರ ಆಗಸ್ಟ್ 1ಕ್ಕೆ ಬಿಡುಗಡೆ!
ಟ್ರೇಲರ್‌ನಲ್ಲೇ ಕುತೂಹಲ ಮೂಡಿಸಿದೆ ʼರಾಜನಿವಾಸʼ ಚಿತ್ರ
ಬೆಂಗಳೂರು: ಡಿ.ಪಿ. ಆಂಜನಪ್ಪ ನಿರ್ಮಿಸಿರುವ, ಲೋಕೇಶ್ ಗೌಡ ಅವರ ಸಹ ನಿರ್ಮಾಣವಿರುವ, ಮಿಥುನ್ ನಿರ್ದೇಶನದ ಹಾಗೂ ರಾಘವ್ ನಾಯಕ್, ಕೃತಿಕ ಅಭಿನಯದ ಮತ್ತು ಶ್ರೀನಗರ ಕಿಟ್ಟಿ ವಿಶೇಷ ಪಾತ್ರದಲ್ಲಿ ನಟಿಸಿರುವ ʼರಾಜನಿವಾಸʼ ಚಿತ್ರದ (Rajanivaasa Movie) ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಕ.ರ.ವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ಅವರು ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಅನ್ನು ಬಿಡುಗಡೆ ಮಾಡಿದರು. ನಟ ಆದಿತ್ಯ, ನಿರ್ಮಾಪಕರಾದ ಉದಯ್ ಕೆ ಮೆಹ್ತಾ, ಸಂಜಯ್ ಗೌಡ, ವೀರಕಪುತ್ರ ಶ್ರೀನಿವಾಸ್, ರಾಬರ್ಟ್ ಕ್ರಿಸ್ಟೋಫರ್, ರಮೇಶ್ ಗೌಡ ಅವರು ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದು ʼರಾಜನಿವಾಸʼ ಚಿತ್ರಕ್ಕೆ ಶುಭ ಹಾರೈಸಿದರು.
ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಕ.ರ.ವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರು, ಕನ್ನಡ ಚಿತ್ರರಂಗದ ಇಂದಿನ ಪರಿಸ್ಥಿತಿ ಬಗ್ಗೆ ಕೇಳಿದಾಗ ಬಹಳ ಬೇಸರವಾಗುತ್ತದೆ. ಚಿತ್ರರಂಗದ ಹಿರಿಯರೊಡನೆ ನಾನು ಈ ಚಿತ್ರರಂಗದ ವಿಷಯಗಳನ್ನು ಮಾತನಾಡುತ್ತಿರುತ್ತೇನೆ. ಹಿಂದೆ ರಾಜಕುಮಾರ್ ಅವರ ಜತೆಗೆ ಚಿತ್ರರಂಗದ ಪರವಾಗಿ ಸಾಕಷ್ಟು ಹೋರಾಟಗಳಲ್ಲಿ ಭಾಗಿಯಾಗಿದ್ದೇನೆ. ಕನ್ನಡ ಚಿತ್ರರಂಗಕ್ಕಾಗಿ ದುಡಿದಿರುವ ಹಲವು ಹಿರಿಯ ಕಲಾವಿದರು ಹಾಗೂ ತಂತ್ರಜ್ಞರು ಇದ್ದಾರೆ. ಆ ನಿಟ್ಟಿನಲ್ಲಿ ಕನ್ನಡ ಚಿತ್ರರಂಗದ ಗಣ್ಯರನ್ನು ಗೌರವಿಸಲು ಸದ್ಯದಲ್ಲೇ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಿದ್ದೇವೆ. ಬರೀ ಸ್ಮರಣಿಕೆ ಮಾತ್ರ ನೀಡದೆ, ಅದರ ಜತೆಗೆ ಒಂದು ಲಕ್ಷ ನಗದು ಸಹ ನೀಡುವ ಯೋಜನೆ ಹಾಕಿಕೊಂಡಿದ್ದೇವೆ. ಈ ಕುರಿತು ಚಿತ್ರರಂಗದ ಹಿರಿಯರೊಂದಿಗೆ ಮಾತುಕತೆ ನಡೆಸಿದ್ದೇವೆ. ಇನ್ನೂ ಈ ಚಿತ್ರದ ನಿರ್ಮಾಪಕ ಆಂಜನಪ್ಪ ಅವರು ಬಹಳ ವರ್ಷಗಳಿಂದ ಕನ್ನಡಪರ ಕೆಲಸ ಮಾಡಿಕೊಂಡು ಬರುತ್ತಿದ್ದಾರೆ. ಅವರ ನಿರ್ಮಾಣದ ʼರಾಜನಿವಾಸʼ ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಹಾರೈಸಿದರು.
ʼರಾಜನಿವಾಸʼ ಚಿತ್ರದ ಟ್ರೇಲರ್ ನೋಡಿದಾಗ ಕೆಲವರಿಗೆ ʼಕಾಂತಾರʼ ಚಿತ್ರ ನೆನಪಾಗಬಹುದು. ಆದರೆ ಇದು ʼಕಾಂತಾರʼ ಚಿತ್ರಕ್ಕೂ ಮೊದಲೇ ಆರಂಭವಾದ ಚಿತ್ರ. ಆದರೆ ʼಕಾಂತಾರʼ ಮೊದಲು ಬಿಡುಗಡೆಯಾಯಿತು. ಆ ಚಿತ್ರವನ್ನು ನೋಡಿದ ನಂತರ ನಮ್ಮ ಚಿತ್ರದಲ್ಲಿ ಸಾಕಷ್ಟು ಬದಲಾವಣೆ ಮಾಡಿದ್ದೇವೆ. ಈಗ ನಮ್ಮ ಚಿತ್ರ ತೆರಗೆ ಬರಲು ಸಿದ್ದವಾಗಿದೆ. ಕನ್ನಡ ಸೇರಿದಂತೆ ದಕ್ಷಿಣ ಭಾರತದ ನಾಲ್ಕು ಭಾಷೆಗಳಲ್ಲಿ ನಮ್ಮ ಚಿತ್ರ ಬಿಡುಗಡೆಯಾಗಲಿದೆ. ಆನಂದ್ ಆಡಿಯೋ ಯೂಟ್ಯೂಬ್ ಚಾನಲ್‌ನಲ್ಲಿ ನಾಲ್ಕು ಭಾಷೆಗಳ ಟ್ರೇಲರ್ ಇಂದು ಬಿಡುಗಡೆಯಾಗಿದೆ. ಸದ್ಯದಲ್ಲೇ ಮೊದಲ ಹಾಡು ಸಹ ಅನಾವರಣವಾಗಲಿದೆ. ಚಿತ್ರ ಅಂದುಕೊಂಡ ಹಾಗೆ ಬರಲು ಸಹಕಾರ ನೀಡಿದ ನಿರ್ಮಾಪಕರಿಗೆ ಹಾಗೂ ಚಿತ್ರತಂಡಕ್ಕೆ ಧನ್ಯವಾದ ಎಂದರು ನಿರ್ದೇಶಕ ಮಿಥುನ್.
ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ನಾರಾಯಣ ಗೌಡ ಅವರಿಗೆ ಹಾಗೂ ಆಗಮಿಸಿದ ಪ್ರತಿಯೊಬ್ಬ ಗಣ್ಯರಿಗೆ ಧನ್ಯವಾದ ಎಂದು ಮಾತು ಆರಂಭಿಸಿದ ನಿರ್ಮಾಪಕ ಆಂಜನಪ್ಪ, ನಮ್ಮ ಚಿತ್ರದ ಟ್ರೇಲರ್‌ಗೆ ಸಿಗುತ್ತಿರುವ ಮೆಚ್ಚುಗೆಗೆ ಮನತುಂಬಿ ಬಂದಿದೆ. ಚಿತ್ರ ಚೆನ್ನಾಗಿ ಮೂಡಿಬರಲು ನಿರ್ದೇಶಕರು ಹಾಗೂ ಚಿತ್ರತಂಡದ ಶ್ರಮ ಬಹಳಷ್ಟಿದೆ. ಸಹ ನಿರ್ಮಾಪಕರಾದ ಲೋಕೇಶ್ ಗೌಡ ಅವರು ಸೇರಿದಂತೆ ಅನೇಕ ಸ್ನೇಹಿತರು ನನ್ನೊಂದಿಗಿದ್ದಾರೆ. ನಾನು ಸಹ ಕಲಾಮಂದಿರದ ವಿದ್ಯಾರ್ಥಿಯಾಗಿದ್ದೆ. ಅಲ್ಲಿದ್ದಾಗ ಸಾಕಷ್ಟು ಚಿತ್ರರಂಗದವರು ಪರಿಚಯವಾದರು. ನಮ್ಮ ಚಿತ್ರ ಕರ್ನಾಟಕ ಮಾತ್ರವಲ್ಲದೆ ಭಾರತದಾದ್ಯಂತ ಎಲ್ಲರ ಮೆಚ್ಚುಗೆ ಪಡೆದುಕೊಳ್ಳುವ ಭರವಸೆ ಇದೆ. ಈ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.
ಈ ಸುದ್ದಿಯನ್ನೂ ಓದಿ | Ashada Sale 2025: ಆಫರ್... ಆಫರ್! ಆಷಾಡಕ್ಕೆ ಭರ್ಜರಿ ಸೇಲ್
ಸಹ ನಿರ್ಮಾಪಕ ಲೋಕೇಶ್ ಗೌಡ ಅವರು ಸಹ ಎಲ್ಲರಿಗೂ ಧನ್ಯವಾದ ತಿಳಿಸಿದರು. ನಾಯಕ ರಾಘವ ಹಾಗೂ ನಾಯಕಿ ಕೃತಿಕ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಕಲಾವಿದರಾದ ನೀನಾಸಂ ಅಶ್ವತ್, ಯಮುನ ಶ್ರೀನಿಧಿ, ಸಹನ ಹಾಗೂ ಸಂಗೀತ ನಿರ್ದೇಶಕ ವಿಜಯ್ ಯಾರ್ಡ್ಲಿ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.