Saturday, 14th December 2024

ಮಾಧ್ಯಮಗಳ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ನಟಿ ಶಿಲ್ಪಾ ಶೆಟ್ಟಿ

ಮುಂಬೈ: ತಮ್ಮ ಪತಿ ರಾಜ್ ಕುಂದ್ರಾ (ನೀಲಿ ಸಿನಿಮಾ ನಿರ್ಮಾಣ ಪ್ರಕರಣದಡಿ) ಬಂಧನದ ನೋವಿನಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಇದೀಗ ಮಾಧ್ಯಮಗಳ ವಿರುದ್ಧ ಕಾನೂನು ಹೋರಾಟ ನಡೆಸಿದ್ದಾರೆ.

ಪತಿ ರಾಜ್‌ ಕುಂದ್ರಾ ಪ್ರಕರಣಕ್ಕೆ ಸಂಬಂಧಿಸಿ, ತಮ್ಮ ಕುರಿತು ಸುಳ್ಳು ಮತ್ತು ಚಾರಿತ್ರ್ಯ ಹರಣ ಮಾಡುವಂತಹ ಸುದ್ದಿಗಳನ್ನು ಪ್ರಸಾರ ಮಾಡಲಾಗಿದೆ ಎಂದು ನಟಿ ಶಿಲ್ಪಾ ಶೆಟ್ಟಿ ಆರೋಪಿಸಿದ್ದಾರೆ. ಜೊತೆಗೆ 29 ಮಾಧ್ಯಮ ಸಿಬ್ಬಂದಿ ಮತ್ತು ಮಾಧ್ಯಮ ಸಂಸ್ಥೆಗಳ ವಿರುದ್ಧ ಬಾಂಬೆ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ನೀಲಿ ಸಿನಿಮಾ ನಿರ್ಮಾಣ ಹಾಗೂ ಅವುಗಳನ್ನು ಆಯಪ್ ಮೂಲಕ ವಿತರಣೆ ಪ್ರಕರಣದಡಿ ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಜು.19ರ ರಾತ್ರಿ ಮುಂಬೈನ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದರು. ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ಸಂಬಂಧಿತ ವಿಭಾಗ ಗಳ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.