ಬೆಂಗಳೂರು: ಅದಿತಿ ಪ್ರಭುದೇವ ಹೊಸ ವರ್ಷದ ದಿನವೇ ಸ್ವೀಟ್ ಗುಡ್ ನ್ಯೂಸ್ ನೀಡಿದ್ದಾರೆ.
2024 ಕ್ಕೆ ನಾನು “ಅಮ್ಮ” ಎಂದು ನಟಿ ಅದಿತಿ ಪ್ರಭುದೇವ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಬೇಬಿ ಬಂಪ್ ಜೊತೆಗಿನ ಫೋಟೋಗಳನ್ನು ಹಂಚಿ ಕೊಂಡಿದ್ದಾರೆ. ಕಿರುತೆರೆಯಿಂದ ಬೆಳ್ಳಿ ತೆರೆಗೆ ಬಂದು ಯಾವುದೇ ವಿವಾದಗಳಿಗೆ ಸಿಲುಕಿಕೊಳ್ಳದೇ ತಮ್ಮದೆ ಆದ ಒಂದು ವ್ಯಕ್ತಿತ್ವದಿಂದ ಅಭಿಮಾನಿಗಳ ಮನ ಗೆದ್ದಿರುವ ನಟಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.
ನಟಿ ಅದಿತಿ ಪ್ರಭುದೇವ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಮುದ್ದಾದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
“ಸಂಬಂಧಗಳಲ್ಲಿ ಶ್ರೇಷ್ಠವಾದದ್ದು, ಹುಟ್ಟಿದಾಗಿನಿಂದ ಸಾಯುವವರೆಗೂ ಪ್ರತಿಯೊಂದು ನೋವು ನಲಿವಿನಲ್ಲೂ ನಮ್ಮ ಬಾಯಿಂದ ಬರುವ ಏಕೈಕ ಪದ “ಅಮ್ಮ”… ಜೀವನದಲ್ಲಿ ಪ್ರತಿಯೊಬ್ಬರೂ ಪ್ರೀತಿಯಿಂದ ಗೌರವದಿಂದ ಕಾಣುವ ಸಂಬಂಧ “ಅಮ್ಮ”… ಪ್ರತಿಕ್ಷಣ ನಮಗಾಗಿ ಮಿಡಿಯುವ ಜೀವ “ಅಮ್ಮ”… 2024 ಕ್ಕೆ ನಾನು ” ಅಮ್ಮ”” ಎಂದು ಬರೆದುಕೊಂಡಿದ್ದಾರೆ.
ಪತಿ ಪತ್ನಿ ಇಬ್ಬರು ಒಂದೇ ಕಲರ್‌ನ ಬಟ್ಟೆ ತೊಟ್ಟು ಫೋಟೋಶೂಟ್ ಮಾಡಿಸಿದ್ದಾರೆ. ಜೊತೆಗೆ ನಟಿಯ ಮುದ್ದಾದ ನಾಯಿಮರಿ ‘ಚಾಕೋಲೆಟ್’ ಕೂಡ ಫೋಟೋಶೂಟ್‌ನಲ್ಲಿ ಭಾಗಿಯಾಗಿದೆ.