Anamadheya Ashok Kumar Movie: ಫೆ. 7ರಂದು ಕ್ರೈಂ ಥ್ರಿಲ್ಲರ್‌ ʼಅನಾಮಧೇಯ ಅಶೋಕ್ ಕುಮಾರ್ʼ ಚಿತ್ರ ರಿಲೀಸ್‌

ಸಾಗರ್ ಕುಮಾರ್ ನಿರ್ದೇಶನದ ʼಅನಾಮಧೇಯ ಅಶೋಕ್ ಕುಮಾರ್ʼ ಚಿತ್ರ ಫೆಬ್ರವರಿ 7 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಜನಪ್ರಿಯ ನಟ ಕಿಶೋರ್ ಕುಮಾರ್ ಹಾಗೂ ʼಆಚಾರ್ & ಕೋʼ ಚಿತ್ರದ ಹರ್ಷಿಲ್ ಕೌಶಿಕ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Anamadheya Ashok Kumar Movie
Profile Siddalinga Swamy Jan 30, 2025 8:42 PM

ಬೆಂಗಳೂರು: ಎಸ್‌ಕೆಎನ್ ಫಿಲಂಸ್ ಲಾಂಛನದಲ್ಲಿ ನಿರ್ಮಲಾ ಕುಮಾರ್ ಹಾಗೂ ರಮ್ಯ ಸಾಗರ್ ಕುಮಾರ್ ನಿರ್ಮಿಸಿರುವ, ಕಿಶೋರ್ ಕುಮಾರ್ ಸಹ ನಿರ್ಮಾಣವಿರುವ ಹಾಗೂ ಸಾಗರ್ ಕುಮಾರ್ ನಿರ್ದೇಶನದ ʼಅನಾಮಧೇಯ ಅಶೋಕ್ ಕುಮಾರ್ʼ ಚಿತ್ರ (Anamadheya Ashok Kumar Movie) ಫೆಬ್ರವರಿ 7ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಜನಪ್ರಿಯ ನಟ ಕಿಶೋರ್ ಕುಮಾರ್ ಹಾಗೂ ʼಆಚಾರ್ & ಕೋʼ ಚಿತ್ರದ ಹರ್ಷಿಲ್ ಕೌಶಿಕ್ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಬಿಡುಗಡೆಯ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.



ಮೂಲತಃ ಐಟಿ ಉದ್ಯೋಗಿಯಾಗಿರುವ ನಾನು, ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸಿದ್ದೇನೆ. ಹಿರಿತೆರೆಯಲ್ಲಿ ಇದು ಮೊದಲ ಚಿತ್ರ. ದೇಶದಲ್ಲಿ ನಡೆದ ಕೆಲವು ಕ್ರೈಮ್ ಫಟನೆಗಳು ಹಾಗೂ ಮಾಜಿ ಪೊಲೀಸ್ ಅಧಿಕಾರಿಯೊಬ್ಬರು ಬರೆದ ಪುಸ್ತಕ ಈ ಚಿತ್ರದ ಕಥೆಗೆ ಸ್ಪೂರ್ತಿ. ಇದು ಸಂಜೆ ಆರರಿಂದ ಬೆಳಗ್ಗೆ ಆರರವರೆಗೂ ನಡೆಯುವ ಕಥೆ. ಪ್ರಸಿದ್ದ ವಕೀಲರೊಬ್ಬರ ಕೊಲೆಯ ಸುತ್ತ ನಡೆಯುವ ಕಥೆಯೂ ಹೌದು. ಚಿತ್ರಕ್ಕೆ ನಾನೇ ಕಥೆ ಬರದಿದ್ದೇನೆ. ಚಿತ್ರಕಥೆಯನ್ನು ನಾನು ಹಾಗೂ ಬೆನ್ನಿ ಥಾಮಸ್ ಇಬ್ಬರೂ ಬರೆದಿದ್ದೇವೆ. ಕಿಶೋರ್ ಕುಮಾರ್ ಪತ್ರಕರ್ತನ ಪಾತ್ರದಲ್ಲಿ ಹಾಗೂ ಹರ್ಷಿಲ್ ಕೌಶಿಕ್ ಸರ್ಕಲ್ ಇನ್ಸ್‌ಪೆಕ್ಟರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸುಧೀಂದ್ರ ನಾಯರ್, ಕಾಂತರಾಜ್ ಕಡ್ಡಿಪುಡಿ, ವೀರೇಶ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಫೆಬ್ರವರಿ 7ರಂದು ನಮ್ಮ ಚಿತ್ರ ತೆರೆಗೆ ಬರಲಿದೆ ಎಂದು ನಿರ್ದೇಶಕ ಸಾಗರ್ ಕುಮಾರ್ ತಿಳಿಸಿದರು.

Anamadheya Ashok Kumar

ಸಾಗರ್ ಕುಮಾರ್ ಅವರು ಹೇಳಿದ ಕಥೆ ಇಷ್ಟವಾಯಿತು ಎಂದು ಮಾತನಾಡಿದ ನಟ ಕಿಶೋರ್ ಕುಮಾರ್, ನಾನು ಈ ಚಿತ್ರದಲ್ಲಿ ಪತ್ರಕರ್ತನಾಗಿ ಅಭಿನಯಿಸಿದ್ದೇನೆ‌‌. ʼಅನಾಮಧೇಯʼ ಎಂದರೆ ಹೆಸರಿಲ್ಲದವನು ಎಂದು. ನಮ್ಮ ಚಿತ್ರದಲ್ಲಿ ʼಅನಾಮಧೇಯ ಅಶೋಕ್ ಕುಮಾರ್ʼ ಯಾರು? ಎಂಬ ಗುಟ್ಟನ್ನು ನಿರ್ದೇಶಕರು ಬಿಟ್ಟುಕೊಟ್ಟಿಲ್ಲ. ಅದು ಯಾರು ಎಂಬುದನ್ನು ಚಿತ್ರ ನೋಡಿ ತಿಳಿದುಕೊಳ್ಳಬೇಕು. ಕನ್ನಡ ಚಿತ್ರರಂಗದ ಸದ್ಯದ ಪರಿಸ್ಥಿತಿ ತಮಗೆಲ್ಲಾ ಗೊತ್ತಿದೆ. ಆದರೂ ಚಿತ್ರಗಳ ನಿರ್ಮಾಣ ಹಾಗೂ ಬಿಡುಗಡೆ ಕಡಿಮೆ ಆಗಿಲ್ಲ. ಉತ್ತಮ ಕಂಟೆಂಟ್‌ವುಳ್ಳ ಚಿತ್ರವನ್ನು ಪ್ರೇಕ್ಷಕ ಮೆಚ್ಚಿಕೊಳ್ಳವುದರಲ್ಲಿ ಯಾವುದೇ ಸಂದೇಹವಿಲ್ಲ. ಹೊಸತಂಡದ ಪ್ರಯತ್ನಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು.

ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡ ನಟ ಹರ್ಷಿಲ್ ಕೌಶಿಕ್, ಕಿಶೋರ್ ಅವರ ಜತೆಗೆ ನಟಿಸಿದ್ದು ಖುಷಿಯಾಗಿದೆ ಎಂದರು.

ಈ ಸುದ್ದಿಯನ್ನೂ ಓದಿ | Mid Winter Mens Fashion 2025: ಪುರುಷರ ಯಂಗ್ ಲುಕ್‌ಗೆ ಸಾಥ್ ನೀಡುವ ಮಿಡ್ ವಿಂಟರ್ ಫ್ಯಾಷನ್ ವೇರ್‌ಗಳಿವು

ಚಿತ್ರದಲ್ಲಿ ನಟಿಸಿರುವ ವೀರೇಶ್, ಸುಷ್ಮ, ಗಗನ, ದೀಪಕ್ ಸಂಗೀತ ನಿರ್ದೇಶಕ ಆಜಾದ್, ಛಾಯಾಗ್ರಾಹಕ ಸುನೀಲ್ ಹೊನಳ್ಳಿ, ಸಂಕಲನಕಾರ ಯೇಸು ಹಾಗೂ ವಿತರಕ ಕುನಾಲ್ ಹಾಗೂ ರವಿಚಂದ್ರನ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?