Sunday, 15th December 2024

ಆರ್ಯನ್​ ಖಾನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಮುಂಬೈ: ಕ್ರೂಸ್ ಶಿಪ್​​​ನಲ್ಲಿ ಡ್ರಗ್ಸ್​ ಪಾರ್ಟಿ ನಡೆಸಿದ ಆರೋಪದಲ್ಲಿ ಬಂಧಿಸಲ್ಪಟ್ಟಿರುವ ಬಾಲಿವುಡ್​ ತಾರೆ ಶಾರುಖ್​ ಖಾನ್​ರ ಮಗ ಆರ್ಯನ್​ ಖಾನ್​ಗೆ ಜಾಮೀನು ಸಿಗಲಿಲ್ಲ.

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋಗೆ ಹೇಳಿಕೆ ಸಲ್ಲಿಸಲು ಅವಕಾಶ ನೀಡಿದ ಮುಂಬೈನ ವಿಶೇಷ ಎನ್​ಡಿಪಿಎಸ್​ ಕೋರ್ಟ್​, ಜಾಮೀನು ಅರ್ಜಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.

ಎನ್​ಸಿಬಿ ಅಧಿಕಾರಿಗಳಿಂದ ಬಂಧಿಸಲ್ಪಟ್ಟ 23 ವರ್ಷ ವಯಸ್ಸಿನ ಆರ್ಯನ್​ ಖಾನ್​, ಕಳೆದ ಶುಕ್ರವಾರದಿಂದ ಜೈಲಿನಲ್ಲಿದ್ದಾನೆ. ಜಾಮೀನು ಅರ್ಜಿಗೆ ಹೇಳಿಕೆ ಸಲ್ಲಿಸಲು ಸೋಮವಾರ ಎನ್​ಸಿಬಿ ವಕೀಲರು ಶುಕ್ರವಾರದವರೆಗೆ ಕಾಲಾವಕಾಶ ಕೋರಿದರು. ಆದರೆ ನ್ಯಾಯಾಲಯ ಬುಧವಾರದೊಳಗೆ ಹೇಳಿಕೆ ಸಲ್ಲಿಸಬೇಕೆಂದು ಸೂಚಿಸಿ, ವಿಚಾರಣೆ ಮುಂದೂಡಿತು.