Thursday, 12th December 2024

ಆರ್ಯನ್‌ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಮುಂಬೈ: ಡ್ರಗ್ಸ್‌ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ನಟ ಶಾರೂಖ್ ಪುತ್ರ ಆರ್ಯನ್‌ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಾಳೆ ಮುಂದೂಡಿದೆ.

ನ್ಯಾಯಾಲಯದ ಮುಂದೆ ಸರ್ಕಾರಿ ಪರ ವಕೀಲ ಎಎಸ್‌ಜಿ ಅನಿಲ್ ಸಿಂಗ್ ಆರ್ಯನ್ ಖಾನ್ ಮಾದಕ ದ್ರವ್ಯಕ್ಕಾಗಿ ವಿದೇಶದಲ್ಲಿ ವಾಸಿಸುತ್ತಿರುವ ವ್ಯಕ್ತಿ ಯೊಂದಿಗೆ ಸಂಪರ್ಕದಲ್ಲಿದ್ದರು ಎಂಬುದಕ್ಕೆ ಪುರಾವೆಗಳಿವೆ ಎಂದು ತಿಳಿಸಿದರು. ಇದೇ ವೇಳೆ ಯಾವುದೇ ಆರೋಪಿಯನ್ನು ಬಿಡುಗಡೆ ಮಾಡಿದರೆ, ಸಾಕ್ಷಿಗೆ ಅಡ್ಡಿಪಡಿಸುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಇದೇ ವೇಳೆ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಮತ್ತು ಇತರ ಆರೋಪಿಗಳ ಜಾಮೀನು ವಿಚಾರಣೆ ಗುರುವಾರ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ ಎಂದು ಮುಂಬೈ ಕೋರ್ಟ್ ಮಾಹಿತಿ ನೀಡಿತು.