Wednesday, 11th December 2024

ಹಿರಿಯ ನಟ ಅಶ್ವಥ್ ನಾರಾಯಣ ವಿಧಿವಶ

ಬೆಂಗಳೂರು: ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ನಟ ಅಶ್ವಥ್ ನಾರಾಯಣ ವಿಧಿವಶರಾಗಿದ್ದಾರೆ.

ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದಷ್ಟೇ, ನನ್ನ ಕುಟುಂಬಸ್ಥರು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ನನ್ನ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಕಾನೂನು ಕ್ರಮ ಕೈಗೊಳ್ಳುವಂತೆ ಹಿರಿಯ ನಟ ಅಶ್ವಥ್ ನಾರಾಯಣ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಹಿರಿಯ ನಟ ಅಶ್ವಥ್ ನಾರಾಯಣ್ ಮಾಡಿರೋ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕುಟುಂಬಸ್ಥರು, ಯಾವುದೇ ರೀತಿಯ ಹಲ್ಲೆ ನಡೆಸಿಲ್ಲ. ಅವರು ನೀಡಿರುವ ದೂರು ಸತ್ಯಕ್ಕೆ ದೂರವಾಗಿರುವುದಾಗಿ ತಿಳಿಸಿದ್ದರು.

ಕೌಟುಂಬಿಕ ಜಗಳ ಮೂಲಕ ಸುದ್ದಿಯಾಗಿದ್ದ ಹಿರಿಯ ನಟ ನಿಧನರಾಗಿರುವುದಾಗಿ ತಿಳಿದು ಬಂದಿದೆ.