Sunday, 15th December 2024

ರಾಗಿಣಿ, ಸಂಜನಾ ಜಾಮೀನು ಅರ್ಜಿ ವಿಚಾರಣೆ ನಾಳೆ

ಬೆಂಗಳೂರು: ಸ್ಯಾಂಡಲ್‍‍ವುಡ್ ಡ್ರಗ್ ನಂಟು ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ನಟಿಯರಾದ ಸಂಜನಾ ಗಲ್ರಾನಿ ಹಾಗೂ ರಾಗಿಣಿ ದ್ವಿವೇದಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ನಾಳೆಗೆ ಮುಂದೂಡಿದೆ.

ಇಬ್ಬರು ನಟಿಯರು ಸೇರಿ ಐವರ ಜಾಮೀನು ಅರ್ಜಿ ಇಂದು ವಿಚಾರಣೆಗೆ ಬಂದಿತ್ತು. ನಾಳೆ ಆರೋಫಿ ಪರ ವಕೀಲರ ವಾದಕ್ಕೆ ಕೋರ್ಟ್ ಅವಕಾಶ ನೀಡಿದೆ.