BBK 11: ಮಿಡ್ ವೀಕ್ ಎಲಿಮಿನೇಷನ್ ರದ್ದು: ಧನರಾಜ್ಗೆ ಬಿಗ್ ಶಾಕ್ ಕೊಟ್ಟ ಬಿಗ್ ಬಾಸ್
ಬಿಗ್ ಬಾಸ್ ಮಿಡ್ ವೀಕ್ ಎಲಿಮಿನೇಷನ್ ಅನ್ನೇ ರದ್ದು ಮಾಡಿದ್ದಾರೆ. ಇದರ ಜೊತೆಗೆ ಮತ್ತೊಂದು ಮಹತ್ವದ ಘೋಷಣೆ ಕೂಡ ಮಾಡಿದ್ದಾರೆ. ಧನರಾಜ್ ಎಲಿಮಿನೇಷನ್ನಿಂದ ಪಾರಾಗುವ ಪಾಸ್ ಪಡೆದಿದ್ದರು. ಇದನ್ನು ಹಿಂತೆಗೆದುಕೊಳ್ಳಲಾಗಿದೆ.
ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ (Bigg Boss Kannada 11) ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಬುಧವಾರದ ಎಪಿಸೋಡ್ನಲ್ಲಿ ಮಿಡ್ ವೀಕ್ ಎಲಿಮಿನೇಷನ್ ಮೂಲಕ ಓರ್ವ ಸ್ಪರ್ಧಿ ಆಚೆ ಹೋಗಬೇಕಿತ್ತು. ಆದರೆ, ಅಂತಿಮ ಹಂತದಲ್ಲಿ ಬಿಗ್ ಬಾಸ್ ಬಿಗ್ ಟ್ವಿಸ್ಟ್ ಕೊಟ್ಟು, ಮಿಡ್ ವೀಕ್ ಎಲಿಮಿನೇಷನ್ ಮುಂದೂಡಲಾಗಿದೆ ಎಂದು ಹೇಳಿದ್ದರು. ಆದರೆ, ಇದಕ್ಕೆ ಕಾರಣ ಏನು ಎಂಬುದು ನಿಗೂಡವಾಗಿ ಉಳಿದಿತ್ತು. ಹೀಗಿರುವಾಗ ಇದೀಗ ಬಿಗ್ ಬಾಸ್ ಉದಾಹರಣೆ ಸಮೇತ ಎಲ್ಲ ವಿಚಾರವನ್ನು ಬಿಚ್ಚಿಟ್ಟಿದ್ದಾರೆ.
ಈ ವಾರ ಮಿಡ್ ವೀಕ್ ಎಲಿಮಿನೇಷನ್ ಇರಲಿದೆ ಎಂದು ಬಿಗ್ ಬಾಸ್ ವಾರದ ಮೊದಲ ದಿನವೇ ಹೇಳಿದ್ದರು. ಹಾಗೆಯೆ ಮಿಡ್ ವೀಕ್ ನಾಮಿನೇಷನ್ನಿಂದ ಪಾರಾಗಲು ಬಿಗ್ ಬಾಸ್ ಸ್ಪರ್ಧಿಗಳಿಗೆ ಕಾಲ ಕಾಲಕ್ಕೆ ಟಾಸ್ಕ್ ನೀಡುತ್ತಿದ್ದರು. ಈ ಟಾಸ್ಕ್ನಲ್ಲಿ ಅತಿ ಹೆಚ್ಚು ಪಾಯಿಂಟ್ಸ್ ಪಡೆದು ಧನರಾಜ್ ಆಚಾರ್ ಸೇವ್ ಆಗಿದ್ದರು. ಆದರೆ, ಕೊನೆಯ ಟಾಸ್ಕ್ನಲ್ಲಿ ಧನರಾಜ್ ಮೋಸದಾಟ ಆಡಿರುವುದು ಬೆಳಕಿಗೆ ಬಂದಿದೆ. ಧನು ಎದುರಿದ್ದ ಕನ್ನಡಿಯನ್ನು ನೋಡಿ ಪಜಲ್ ಗೇಮ್ ಆಡಿದ್ದರು. ಹೀಗಾಗಿ ಬಿಗ್ ಬಾಸ್ ಮಿಡ್ ವೀಕ್ ಎಲಿಮಿನೇಷನ್ ತಡೆ ಹಿಡಿದಿದ್ದರು.
ಬಿಗ್ ಬಾಸ್ ತೋರಿಸಿರುವ ವಿಡಿಯೋವನ್ನು ನೋಡಿರುವ ಧನರಾಜ್, ತಾವು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಜೊತೆಗೆ ಬಿಗ್ಬಾಸ್ ನನ್ನಿಂದ ಅಷ್ಟು ದೊಡ್ಡ ತಪ್ಪಾಗಿದೆ ಅಂತ ಗೊತ್ತಾಗಲಿಲ್ಲ. ಆ ಗೆಲುವು ನನ್ನದು ಅಲ್ಲ ಅಂತ ಅನಿಸುತ್ತಿದೆ. ನನ್ನನ್ನೂ ನಾಮಿನೇಟ್ ಮಾಡಿಕೊಂಡೆ ಪ್ರಕ್ರಿಯೆ ಶುರು ಮಾಡಿ ಪ್ಲಿಸ್ ಅಂತ ಕೇಳಿಕೊಂಡಿದ್ದಾರೆ. ಅದರಂತೆ ಬಿಗ್ ಬಾಸ್ ಬಹುದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ.
ಬಿಗ್ ಬಾಸ್ ಮಿಡ್ ವೀಕ್ ಎಲಿಮಿನೇಷನ್ ಅನ್ನೇ ರದ್ದು ಮಾಡಿದ್ದಾರೆ. ಇದರ ಜೊತೆಗೆ ಮತ್ತೊಂದು ಮಹತ್ವದ ಘೋಷಣೆ ಕೂಡ ಮಾಡಿದ್ದಾರೆ. ಧನರಾಜ್ ಎಲಿಮಿನೇಷನ್ನಿಂದ ಪಾರಾಗುವ ಪಾಸ್ ಪಡೆದಿದ್ದರು. ಇದನ್ನು ಹಿಂತೆಗೆದುಕೊಳ್ಳಲಾಗಿದೆ. ಹಾಗೆಯೆ ಈ ವಾರ ಡಬಲ್ ಎಲಿಮಿನೇಷನ್ ಇರಲಿದೆ ಎಂದು ಹೇಳಿದ್ದಾರೆ.
BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ