ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

BRAT Movie: ಡಾರ್ಲಿಂಗ್ ಕೃಷ್ಣ ಅಭಿನಯದ ʼಬ್ರ್ಯಾಟ್ʼ ಚಿತ್ರದ ಟೀಸರ್ ಔಟ್‌

BRAT Movie: ಶಶಾಂಕ್ ನಿರ್ದೇಶನದ, ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ ʼಬ್ರ್ಯಾಟ್ʼ ಚಿತ್ರತಂಡ ಟೀಸರ್ ಬಿಡುಗಡೆ ಮಾಡಿದೆ. ಡಾರ್ಲಿಂಗ್ ಕೃಷ್ಣ ಅವರ ಹುಟ್ಟುಹಬ್ಬದ ಸಲುವಾಗಿ ಈ ಟೀಸರ್ ಬಿಡುಗಡೆ ಮಾಡಿರುವ ಚಿತ್ರತಂಡ ಆ ಮೂಲಕ ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ ಹೇಳಿದೆ. ಈ ಕುರಿತ ವಿವರ ಇಲ್ಲಿದೆ.

ಡಾರ್ಲಿಂಗ್ ಕೃಷ್ಣ ಅಭಿನಯದ ʼಬ್ರ್ಯಾಟ್ʼ ಚಿತ್ರದ ಟೀಸರ್ ಔಟ್‌

Profile Siddalinga Swamy Jun 12, 2025 10:45 PM

ಬೆಂಗಳೂರು: ʼಫಸ್ಟ್ ರ‍್ಯಾಂಕ್ ರಾಜುʼ ಖ್ಯಾತಿಯ ನಿರ್ಮಾಪಕ‌ ಮಂಜುನಾಥ್ ಕಂದಕೂರ್ ಅವರು ಐದು ವರ್ಷಗಳ ನಂತರ ನಿರ್ಮಿಸುತ್ತಿರುವ ಹಾಗೂ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಶಶಾಂಕ್ ನಿರ್ದೇಶನದ ಹಾಗೂ ತಮ್ಮ ನಟನೆಯ ಮೂಲಕ ಜನಪ್ರಿಯರಾಗಿರುವ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ ʼಬ್ರ್ಯಾಟ್ʼ ಚಿತ್ರತಂಡ (BRAT Movie) ಟೀಸರ್ ಬಿಡುಗಡೆ ಮಾಡಿದೆ. ಡಾರ್ಲಿಂಗ್ ಕೃಷ್ಣ ಅವರ ಹುಟ್ಟುಹಬ್ಬದ ಸಲುವಾಗಿ ಈ ಟೀಸರ್ ಬಿಡುಗಡೆ ಮಾಡಿರುವ ಚಿತ್ರತಂಡ ಆ ಮೂಲಕ ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ ಹೇಳಿದೆ.



ಈಗಾಗಲೇ ಶೀರ್ಷಿಕೆ, ಫಸ್ಟ್ ಲುಕ್ ಮೂಲಕ ಎಲ್ಲರ ಗಮನ ಸೆಳೆದಿರುವ ʼಬ್ರ್ಯಾಟ್ʼ ಚಿತ್ರದ ಟೀಸರ್‌ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ‌. ಡಾರ್ಲಿಂಗ್ ಕೃಷ್ಣ-ಮಿಲನ ನಾಗರಾಜ್ ಪುತ್ರಿ ಸಹ ಈ ಟೀಸರ್ ವೀಕ್ಷಿಸುತ್ತಿರುವುದು ಸಾಕಷ್ಟು ವೈರಲ್ ಆಗುತ್ತಿದೆ. ಬಹು ನಿರೀಕ್ಷಿತ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ‌

ಈ ಸುದ್ದಿಯನ್ನೂ ಓದಿ | Monsoon Lipsticks 2025: ಮಾನ್ಸೂನ್‌ಗೆ ಕಾಲಿಟ್ಟ ವೈವಿಧ್ಯಮಯ ವಾಟರ್ ಪ್ರೂಫ್ ಲಿಪ್‌ಸ್ಟಿಕ್ಸ್

ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯಾಗಿ ಮನಿಶಾ ಕಂದಕೂರ್ ಅಭಿನಯಿಸುತ್ತಿದ್ದಾರೆ. ರಮೇಶ್ ಇಂದಿರಾ, ಡ್ರ್ಯಾಗನ್ ಮಂಜು ಮುಂತಾದವರ ತಾರಾಬಳಗವಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಅಭಿಲಾಶ್ ಕಲ್ಲತ್ತಿ ಛಾಯಾಗ್ರಹಣವಿದೆ‌.