ಬೆಂಗಳೂರು: ಕನ್ನಡದ ನಟಿ ರಾಧಿಕಾ ಕುಮಾರಸ್ವಾಮಿ ಅವರಿಗೆ ಸಿಸಿಬಿ ನೋಟಿಸ್ ನೀಡಿದ್ದು, ಶುಕ್ರವಾರ ವಿಚಾರಣೆಗೆ ಹಾಜರಾ ಗುವಂತೆ ಸೂಚಿಸಿದೆ.
ಆರೋಪಿ ಯುವರಾಜ್ ಖಾತೆಯಿಂದ ರಾಧಿಕಾ ಕುಮಾರಸ್ವಾಮಿಯವರಿಗೆ 1.25 ಕೋಟಿ ಹಣ ವರ್ಗಾವಣೆ ಆಗಿದೆ ಎನ್ನುವ ಆರೋಪ ಗಳು ಕೇಳಿ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ನಟಿಮಣಿಯನ್ನ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನಾಳೆಯೇ ಸಿಸಿಬಿ ಕಚೇರಿಗೆ ಬಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ʼನಲ್ಲಿ ತಿಳಿಸಿದ್ದಾರೆ.
ವಾಟ್ಸಾಪ್ ಮತ್ತು ಟೆಕ್ಸ್ಟ್ ಮೆಸೇಜ್ ಮೂಲಕ ಅಧಿಕಾರಿಗಳು ನಟಿ ರಾಧಿಕಾಗೆ ನೋಟಿಸ್ ಕಳುಹಿಸಿದ್ದು, ಶುಕ್ರವಾರ ಬೆಳಿಗ್ಗೆ ಸಿಸಿಬಿ ವಿಚಾರಣೆಗೆ ನಟಿಮಣಿ ಹಾಜರಾಗಲಿದ್ದಾರೆ.