Chaser Movie: ಸುಮಂತ್ ಶೈಲೇಂದ್ರ ಅಭಿನಯದ ʼಚೇಸರ್ʼ ಚಿತ್ರದ ಟೀಸರ್ ಶೀಘ್ರದಲ್ಲೇ ರಿಲೀಸ್
Chaser Movie: ಸುಮಂತ್ ಶೈಲೇಂದ್ರ ನಾಯಕನಾಗಿ ನಟಿಸಿರುವ ʼಚೇಸರ್ʼ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಸದ್ಯದಲ್ಲೇ ಟೀಸರ್ ಬಿಡುಗಡೆಯಾಗಲಿದೆ. ಈ ಕುರಿತ ವಿವರ ಇಲ್ಲಿದೆ.
ಬೆಂಗಳೂರು: ಮಾಲತಿ ಶೇಖರ್ ಶಿವಮೊಗ್ಗ ನಿರ್ಮಾಣದ, ಉಪೇಂದ್ರ ಅಭಿನಯದ ʼಬುದ್ದಿವಂತ 2ʼ ಚಿತ್ರದ ಖ್ಯಾತಿಯ ಎಂ. ಜೈರಾಮ್ ನಿರ್ದೇಶನದ ಹಾಗೂ ʼದಿಲ್ವಾಲʼ ಚಿತ್ರದ ಮೂಲಕ ನಾಯಕರಾಗಿ ಚಿತ್ರರಂಗ ಪ್ರವೇಶಿಸಿ, ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ಜನಪ್ರಿಯರಾಗಿರುವ ಸುಮಂತ್ ಶೈಲೇಂದ್ರ ನಾಯಕನಾಗಿ ನಟಿಸಿರುವ ʼಚೇಸರ್ʼ ಚಿತ್ರದ (Chaser Movie) ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ಟೀಸರ್ ಬಿಡುಗಡೆಯಾಗಲಿದೆ.
ಲವ್ ಜಾನರ್ ಜತೆಗೆ ಸಸ್ಪೆನ್ಸ್ ವಿತ್ ಆಕ್ಷನ್ ಕಥಾಹಂದರವನ್ನೂ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ಎಂ. ಜೈರಾಮ್ ಅವರೇ ಕಥೆ, ಚಿತ್ರಕಥೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಸ್. ಚಂದ್ರಶೇಖರ್ ಛಾಯಾಗ್ರಹಣ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಕೆ.ಎಂ. ಪ್ರಕಾಶ್ ಸಂಕಲನ ಈ ಚಿತ್ರಕ್ಕಿದೆ.
ಈ ಸುದ್ದಿಯನ್ನೂ ಓದಿ | Valentines Day Shopping 2025: ಆಗಲೇ ಶುರುವಾಯ್ತು ವ್ಯಾಲೆಂಟೈನ್ಸ್ ಡೇ ಶಾಪಿಂಗ್ !
ಸುಮಂತ್ ಶೈಲೇಂದ್ರ ಅವರಿಗೆ ನಾಯಕಿಯಾಗಿ ರಕ್ಷ ಮೆನನ್ ನಟಿಸಿದ್ದಾರೆ. ರವಿಶಂಕರ್, ರಂಗಾಯಣ ರಘು, ಸಾಧುಕೋಕಿಲ, ಚಿಕ್ಕಣ್ಣ, ಕುರಿ ಪ್ರತಾಪ್, ಸುಚೇಂದ್ರ ಪ್ರಸಾದ್, ಕಡಿಪುಡಿ ಚಂದ್ರು, ಸಂಗೀತ ಮುಂತಾದವರು ʼಚೇಸರ್ʼ ಚಿತ್ರದ ತಾರಾಬಳಗದಲ್ಲಿದ್ದಾರೆ.