Thursday, 12th December 2024

‘ಆ ದಿನಗಳು’ ಚಿತ್ರದ ನಟ ಚೇತನ್ ವಿರುದ್ಧ ದೂರು ದಾಖಲು

ಬೆಂಗಳೂರು: ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ‘ಆ ದಿನಗಳು’ ಚಿತ್ರದ ನಟ ಚೇತನ್ ವಿರುದ್ಧ ದೂರು ದಾಖಲಾಗಿದೆ.

ನಟ ಚೇತನ್, ಬ್ರಾಹ್ಮಣಿಕೆ ಹಾಗೂ ಬ್ರಾಹ್ಮಣತ್ವದವರು ಭಯೋತ್ಪಾದಕರು ಎಂಬ ರೀತಿಯಲ್ಲಿ ಮಾತನಾಡಿದ್ದು, ಬ್ರಾಹ್ಮಣ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ. ಈ ಹೇಳಿಕೆ ಇಡೀ ಸಮುದಾಯಕ್ಕೆ ನೋವು ತಂದಿದೆ. ಹಾಗಾಗಿ ಸೂಕ್ತ ಕ್ರಮ ಕೈಗೊಳ್ಳ ಬೇಕು ಎಂದು ಆಗ್ರಹಿಸಿ ಬ್ರಾಹ್ಮಣ ಸಮುದಾಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಅವರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ನಟ ಚೇತನ್ ತಕ್ಷಣ ಬ್ರಾಹ್ಮಣ ಸಮುದಾಯದ ಕ್ಷಮೆ ಯಾಚಿಸಬೇಕು. ಮತ್ತೊಂದು ಸಮುದಾಯದ ವಿರುದ್ಧ ಮಾತನಾಡ ಬಾರದು ಎಂದು ಎಚ್ಚರಿಸಿದ್ದಾರೆ.