MLA Ravi Ganiga: ನಟಿ ರಶ್ಮಿಕಾ ಮಂದಣ್ಣಗೆ ಬೆದರಿಕೆ ಆರೋಪ; ಶಾಸಕ ರವಿ ಗಣಿಗ ವಿರುದ್ಧ ದೂರು
MLA Ravi Ganiga: ರಶ್ಮಿಕಾ ಮಂದಣ್ಣಗೆ ಬೆದರಿಕೆ ಹಾಕಿದ್ದಾರೆ ಎಂದು ರವಿ ಗಣಿಗ ವಿರುದ್ಧ ಮಹಿಳಾ ಆಯೋಗಕ್ಕೆ ಕೊಡವ ಸಂಘಟನೆಯಿಂದ ಪತ್ರ ಬರೆಯಲಾಗಿದೆ. ರಶ್ಮಿಕಾ ಅವರನ್ನು ಬೆದರಿಸುವುದು ಸಂವಿಧಾನ ವಿರೋಧಿ ಕೃತ್ಯವಾಗಿದೆ. ಹಾಗಾಗಿ ಶಾಸಕನ ವಿರುದ್ಧ ಸುಮೊಟೊ ಕೇಸ್ ದಾಖಲಿಸಬೇಕು ಎಂದು ಮನವಿ ಮಾಡಲಾಗಿದೆ.


ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಬಗ್ಗೆ ಶಾಸಕ ರವಿ ಗಣಿಗ (MLA Ravi Ganiga) ಟೀಕೆ ಹಿನ್ನೆಲೆಯಲ್ಲಿ ಶಾಸಕನ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ರಶ್ಮಿಕಾ ಮಂದಣ್ಣಗೆ ಬೆದರಿಕೆ ಹಾಕಿದ್ದಾರೆ ಎಂದು ರವಿ ಗಣಿಗ ವಿರುದ್ಧ ಮಹಿಳಾ ಆಯೋಗಕ್ಕೆ ಕೊಡವ ಸಂಘಟನೆಯಿಂದ ಪತ್ರ ಬರೆಯಲಾಗಿದೆ. ರಶ್ಮಿಕಾ (Rashmika Mandanna) ಅವರನ್ನು ಬೆದರಿಸಿ ಭಯ ಹುಟ್ಟಿಸಲಾಗಿದೆ. ಅವರು ಅತಿಸೂಕ್ಷ್ಮ ಬುಡಕಟ್ಟು ಸಮುದಾಯದವರಾಗಿದ್ದಾರೆ. ಅವರನ್ನು ಬೆದರಿಸುವುದು ಸಂವಿಧಾನ ವಿರೋಧಿ ಕೃತ್ಯವಾಗಿದೆ. ಹಾಗಾಗಿ ಶಾಸಕನ ವಿರುದ್ಧ ಸುಮೊಟೊ ಕೇಸ್ ದಾಖಲಿಸಿ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ನಾಚಪ್ಪ ಆಗ್ರಹಿಸಿದ್ದಾರೆ.
ಇತ್ತೀಚೆಗೆ ಚಿತ್ಸೋತ್ಸವಕ್ಕೆ ಕರೆದರೆ ರಶ್ಮಿಕಾ ಟೈಮ್ ಇಲ್ಲ ಅಂತಾರೆ ಎಂದು ನಟಿಯ ವಿರುದ್ಧ ರವಿ ಗಣಿಗ ಕೆಂಡಕಾರಿದ್ದರು. ಈ ಬೆನ್ನಲ್ಲೇ ನಟಿಗೆ ಭದ್ರತೆ ಬೇಕು ಅಂತ ಕೊಡವ ಕೌನ್ಸಿಲ್ ಅಧ್ಯಕ್ಷ ಎನ್.ಯು ನಾಚಪ್ಪ ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಈ ವಿಚಾರವಾಗಿ ರವಿ ಗಣಿಗ ಮತ್ತೆ ಪತ್ರಿಕ್ರಿಯೆ ನೀಡಿದ್ದರು. ಪ್ರಚಾರಕೋಸ್ಕರ ನಾಚಪ್ಪ ಪತ್ರ ಬರೆದಿರಬಹುದು. ಅದಕ್ಕೆ ಜಾಸ್ತಿ ಮನ್ನಣೆ ಕೊಡೋ ಅವಶ್ಯಕತೆಯಿಲ್ಲ ಎಂದು ವಿಧಾನಸೌಧದಲ್ಲಿ ಶಾಸಕ ಹೇಳಿಕೆ ನೀಡಿದ್ದರು.
ಆವತ್ತು ನಾನು ಆಡಿದ ಮಾತಿಗೆ ಈಗಲೂ ಬದ್ಧನಿದ್ದೇನೆ. ನಮ್ಮ ಜಲ, ನಮ್ಮ ಭಾಷೆ, ನಮ್ಮ ರಾಜ್ಯವೇ ಮುಖ್ಯ. ನಮ್ಮ ವೈಯಕ್ತಿಕ ಹಿತಾಸ್ತಕಿ ಅಲ್ಲ. ಕಳೆದ ಬಾರಿ ಚಲನಚಿತ್ರೋತ್ಸವಕ್ಕೆ ಕರೆದಾಗ ಅವರು ನಿರಾಕರಿಸಿದ್ದು, ಹಲವಾರು ವೇದಿಕೆಯಲ್ಲಿ ಕನ್ನಡ ಮತ್ತು ಕರ್ನಾಟಕವನ್ನು ಅವಮಾನಕಾರಿಯಾಗಿ ರಶ್ಮಿಕಾ ಮಾತನಾಡಿಡುವುದನ್ನು ಇಂದಿಗೂ ಖಂಡಿಸುತ್ತೇನೆ. ಇವತ್ತಿಗೂ ಕರ್ನಾಟಕದ ಪರ ನಾನಿದ್ದೇನೆ ಅಂತ ಹೇಳಲಿ, ಆ ಬಗ್ಗೆ ನಾನು ತುಟಿಕ್ ಪುಟಿಕ್ ಎನ್ನಲ್ಲ ಎಂದಿದ್ದರು. ಹಾಗಾಗಿ ಈ ಹೇಳಿಕೆಯ ಬೆನ್ನಲ್ಲೇ ರವಿ ಗಣಿಗ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.
ಈ ಸುದ್ದಿಯನ್ನೂ ಓದಿ | Kangana Ranaut: ರಶ್ಮಿಕಾ ಬೆಂಬಲಕ್ಕೆ ಧಾವಿಸಿದ ಕಂಗನಾ; ಡಿಕೆಶಿ ನಟ್ಟು ಬೋಲ್ಟ್ ಹೇಳಿಕೆಗೆ ಗರಂ
ನಾಚಪ್ಪ ವಿರುದ್ಧ ದೂರು
ಮಡಿಕೇರಿ: ಕಾಂಗ್ರೆಸ್ ಶಾಸಕ ರವಿಕುಮಾರ್ ಗೌಡ ಗಣಿಗ ಅವರ ವಿವಾದಾತ್ಮಕ ಹೇಳಿಕೆಯ ನಂತರ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಭದ್ರತೆ ನೀಡುವಂತೆ ಕೋರಿದ್ದ ಕೊಡವ ರಾಷ್ಟ್ರೀಯ ಮಂಡಳಿ (ಸಿಎನ್‌ಸಿ) ಅಧ್ಯಕ್ಷ ನಾಚಪ್ಪ ವಿರುದ್ಧ ದೂರು ದಾಖಲಾಗಿದೆ. ನಾಚಪ್ಪ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಸಂಘಟನೆಯೊಂದು ಸಲ್ಲಿಸಿದ ದೂರಿನಲ್ಲಿ ಆರೋಪಿಸಲಾಗಿದೆ. ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಲಾಗಿದೆ.
ಇತ್ತೀಚೆಗಷ್ಟೇ, ಕೊಡವ ಹಕ್ಕುಗಳ ರಕ್ಷಣಾ ಸಂಘಟನೆಯಾದ ಕೊಡವ ರಾಷ್ಟ್ರೀಯ ಮಂಡಳಿ (Codava National Council), ರಶ್ಮಿಕಾ ಮಂದಣ್ಣ ಅವರ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತಪಡಿಸಿ, ನಡೆಯುತ್ತಿರುವ ರಾಜಕೀಯ ವಿವಾದದ ನಡುವೆ ಅವರಿಗೆ ಭದ್ರತೆ ಒದಗಿಸುವಂತೆ ಕೇಂದ್ರ ಮತ್ತು ಕರ್ನಾಟಕ ಗೃಹ ಸಚಿವರನ್ನು ಒತ್ತಾಯಿಸಿತ್ತು. ಇದೀಗ ಮತ್ತೊಂದು ಸಂಘಟನೆ ಸಿಎನ್‌ಸಿ ಅಧ್ಯಕ್ಷ ನಾಚಪ್ಪ ವಿರುದ್ಧವೇ ದೂರು ಸಲ್ಲಿಸಿದೆ.
ಇತ್ತೀಚೆಗೆ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಹಾಜರಾಗಲು ನಿರಾಕರಿಸುವ ಮೂಲಕ ರಶ್ಮಿಕಾ ಕನ್ನಡ ಚಿತ್ರರಂಗವನ್ನು ಕಡೆಗಣಿಸಿದ್ದಾರೆ ಆರೋಪಿಸಿದ್ದರು. ಅಲ್ಲದೇ ನಟಿಗೆ "ಪಾಠ ಕಲಿಸಬೇಕು" ಎಂಬ ಹೇಳಿಕೆ ಕೊಟ್ಟಿದ್ದರಿಂದ ಅವರ ಹೇಳಿಕೆಗೆ ಕೊಡವ ಸಮಾಜ ಅಸಮಾಧಾನ ಹೊರಹಾಕಿತ್ತು.