Sunday, 15th December 2024

ಮೆಗಾಸ್ಟಾರ್ ಚಿರಂಜೀವಿಗೆ ಕರೋನಾ ಪಾಸಿಟಿವ್

ಹೈದರಾಬಾದ್: ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಅವರಿಗೂ ಕರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಮೆಗಾಸ್ಟಾರ್ ಚಿರಂಜೀವಿ ಅವರು, ಕಳೆದ ರಾತ್ರಿ ಕರೋನಾ ಗುಣಲಕ್ಷಣಗಳನ್ನು ಸಣ್ಣ ಪ್ರಮಾಣದಲ್ಲಿ ಹೊಂದಿತ್ತ ತಾವು ಪರೀಕ್ಷೆಗೆ ಒಳಪಟ್ಟಿದ್ದೆ. ಕೋವಿಡ್ ಪರೀಕ್ಷೆಯಲ್ಲಿ ತಮಗೂ ಕರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಮನೆಯಲ್ಲಿಯೇ ಹೋಂ ಕ್ವಾರಂಟೈನ್ ಆಗಿ, ಚಿಕಿತ್ಸೆ ಪಡೆಯುತ್ತಿದ್ದೇನೆ. ತನ್ನ ಸಂಪರ್ಕದಲ್ಲಿದ್ದ ಎಲ್ಲರೂ ಕರೋನಾ ಪರೀಕ್ಷೆಗೆ ಒಳಪಡುವಂತೆ ಮನವಿ ಮಾಡಿದ್ದಾರೆ.