ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dad Movie: ಶಿವರಾಜ್‍ಕುಮಾರ್ ಅಭಿನಯದ ‘ಡ್ಯಾಡ್‍ʼ ಚಿತ್ರಕ್ಕೆ ನಂದಿ ಬೆಟ್ಟದಲ್ಲಿ 2ನೇ ಹಂತದ ಚಿತ್ರೀಕರಣ

Dad Movie: ಶಿವರಾಜ್‍ಕುಮಾರ್ ಅವರು ನಾಯಕರಾಗಿ ನಟಿಸುತ್ತಿರುವ ಹಾಗೂ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ʼಡ್ಯಾಡ್ʼ ಚಿತ್ರಕ್ಕೆ ಇತ್ತೀಚೆಗಷ್ಟೇ ಮೈಸೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿತ್ತು.‌ ಈಗ ಎರಡನೇ ಹಂತದ ಚಿತ್ರೀಕರಣ ನಂದಿ ಬೆಟ್ಟದಲ್ಲಿ ನಡೆಯತ್ತಿದೆ. ಶಿವರಾಜಕುಮಾರ್, ಬೇಬಿ ನಕ್ಷತ್ರ ಮುಂತಾದವರು ಈ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ಅವರು ನಾಯಕರಾಗಿ ನಟಿಸುತ್ತಿರುವ ಹಾಗೂ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ʼಡ್ಯಾಡ್ʼ ಚಿತ್ರಕ್ಕೆ ಇತ್ತೀಚೆಗಷ್ಟೇ ಮೈಸೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿತ್ತು.‌ ಈಗ ಎರಡನೇ ಹಂತದ ಚಿತ್ರೀಕರಣ ನಂದಿ ಬೆಟ್ಟದಲ್ಲಿ ನಡೆಯತ್ತಿದೆ. ಶಿವರಾಜಕುಮಾರ್, ಬೇಬಿ ನಕ್ಷತ್ರ ಮುಂತಾದವರು ಈ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

ಹರೀಶ್‍ ಪೆದ್ದಿ ಅವರು ಮೈರಾ ಕ್ರಿಯೇಷನ್ಸ್ ಲಾಂಛನದಡಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ಅನಿಲ್‍ ಕನ್ನೆಗಂಟಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ನಿರ್ಮಾಪಕರಿಗೆ ಹಾಗೂ, ನಿರ್ದೇಶಕರಿಗೆ ಇದು ಕನ್ನಡದಲ್ಲಿ ಮೊದಲ ಚಿತ್ರ. ಬಿ.ಎಸ್‍. ಸುಧೀಂದ್ರ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಈ ಸುದ್ದಿಯನ್ನೂ ಓದಿ | Navaratri Fashion 2025: ನವರಾತ್ರಿ ಡಿಸೈನರ್‌ವೇರ್ಸ್‌ ಸೆಲೆಕ್ಷನ್‌ಗೆ ಇಲ್ಲಿದೆ 5 ಐಡಿಯಾ

ಶಿವರಾಜ್‍ಕುಮಾರ್ ಅವರು ಅನೇಕ ವರ್ಷಗಳ ನಂತರ ಈ ಚಿತ್ರದಲ್ಲಿ ವೈದ್ಯನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಶರ್ಮಿಳಾ ಮಾಂಡ್ರೆ, ಬೇಬಿ ನಕ್ಷತ್ರ, ಬಾಬು, ಮಲಯಾಳಂ ನಟ ಸೂರಜ್‍ ವೆಂಜರಮೂಡು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಕನ್ನಡ, ತೆಲುಗು ಮತ್ತು ಮಲಯಾಳಂನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಅರ್ಜುನ್‍ ಜನ್ಯ ಅವರ ಸಂಗೀತ ನಿರ್ದೇಶನ ಹಾಗೂ ಬಿ. ರಾಜಶೇಖರ್ ಅವರ ಛಾಯಾಗ್ರಹಣವಿದೆ.