Saturday, 14th December 2024

ನಟ ದಳಪತಿ ವಿಜಯ್’ಗೆ ಹುಟ್ಟುಹಬ್ಬದ ಸಂಭ್ರಮ

ಚೆನ್ನೈ: ನಟ ದಳಪತಿ ವಿಜಯ್ ಮಂಗಳವಾರ ತಮ್ಮ 47ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ವಿಜಯ್ 1984ರಂದು ‘ವೆಟ್ರಿ’ ಎಂಬ ಚಿತ್ರದಲ್ಲಿ ಅಭಿನಯಿಸುವ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ಅವರ ತಂದೆ ಎಸ್.ಎ.ಚಂದ್ರಶೇಖರ್ ಈ ಸಿನಿಮಾ ನಿರ್ದೇಶನ ಮಾಡಿದ್ದರು. 1992ರಂದು ‘ನಾಲಯಾ ಥೆರ್ಪು’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡರು.

ದಳಪತಿ ವಿಜಯ್ ಹುಟ್ಟುಹಬ್ಬದ ಪ್ರಯುಕ್ತ ಅವರ 65ನೇ ಚಿತ್ರದ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಲಾಗಿದ್ದು ‘ಬೀಸ್ಟ್’ ಎಂಬ ಹೆಸರಿಡಲಾಗಿದೆ.