ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಕೃಷಿ ಇಲಾಖೆ ರಾಯಭಾರಿಯನ್ನಾಗಿ ಸರ್ಕಾರ ನೇಮಿಸಿದೆ.
ಕೃಷಿ ಇಲಾಖೆ ರೈತರ ಹಿತಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಲು ಹಾಗೂ ಕೃಷಿಕರಲ್ಲಿ ಸ್ಫೂರ್ತಿ ತುಂಬಲು ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ನೇಮಿಸಿ ಆದೇಶಿಸಲಾಗಿದೆ. ರಾಯಭಾರಿಯಾಗಿ ಕೆಲಸ ನಿರ್ವಹಿಸಲು ಯಾವುದೇ ಸಂಭಾವನೆ ಇಲ್ಲದೇ ದುಡಿಯುವುದಾಗಿ ದರ್ಶನ್ ಒಪ್ಪಿಕೊಂಡಿದ್ದರು. ಅಲ್ಲದೇ ಈ ಕುರಿತು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ರೈತರೊಂದಿಗೊಂದು ದಿನ ಕಾರ್ಯಕ್ರಮ ಸಹ ಮೆಚ್ಚಿದ್ದರು.
ಸ್ವತಃ ಕೃಷಿಕರೂ ಆಗಿರುವ ದರ್ಶನ್ ಬಿ.ಸಿ.ಪಾಟೀಲ್ ಅವರೊಂದಿಗೆ ಚರ್ಚಿಸಿ ತಮ್ಮ ಮನದಿಂಗಿತ ವ್ಯಕ್ತಪಡಿಸಿದ್ದರು. ಈ ಹಿನ್ನಲೆ ಯಲ್ಲಿ ಸರ್ಕಾರ ಇದೀಗ ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ದರ್ಶನ್ ಅವರನ್ನು ನೇಮಿಸಿ ಆದೇಶಿಸಿದೆ.