ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Actor Darshan: ನಟ ದರ್ಶನ್ ಜೈಲಲ್ಲಿ ಹೇಗೆ ಇರಬೇಕಾಗುತ್ತದೆ? ಪೆರೋಲ್ ಮೇಲೆ ಬಂದು ನಟಿಸಬಹುದಾ?

ರಾಜ್ಯ ಪೊಲೀಸರು ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌‌‌ಗೆ ಮೇಲ್ಮನವಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜಾಮೀನು ಆದೇಶ ರದ್ದು ಮಾಡಿ ಕೂಡಲೆ ಅವರನ್ನು ಬಂಧಿಸುವಂತೆ ಆದೇಶಿಸಿದೆ. ಹೀಗಾಗಿ ನಟ ದರ್ಶನ್ ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಈ ಮಧ್ಯೆ ಅವರಿಗೆ ಮತ್ತೇ ಬೇಲ್ ಆಗುತ್ತಾ..? ಬೇಲ್ ಮೇಲೆ ಬಂದು ನಟನೆ ಮಾಡ್ಬೋದಾ ಎಂಬ ವಿಷಯಗಳು ಚರ್ಚೆಯಾಗುತ್ತಿದೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ ನಟ ದರ್ಶನ್ (Darshan), ಪವಿತ್ರಾ ಗೌಡ ಸೇರಿ ಹಲವು ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ನೀಡಿತ್ತು. ಆದರೆ ರಾಜ್ಯ ಪೊಲೀಸರು ದರ್ಶನ್, ಪವಿತ್ರಾ ಗೌಡ (Pavithra Gowda) ಸೇರಿ 7 ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌‌‌ಗೆ ಮೇಲ್ಮನವಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜಾಮೀನು ಆದೇಶ ರದ್ದು ಮಾಡಿ ಕೂಡಲೆ ಅವರನ್ನು ಬಂಧಿಸುವಂತೆ ಆದೇಶಿಸಿತ್ತು. ಹೀಗಾಗಿ ನಟ ದರ್ಶನ್ ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.

ರಾಜಾತಿಥ್ಯಕ್ಕೆ ಸುಪ್ರೀಂ ಕೋರ್ಟ್ ಕಿಡಿ

ಈ ಹಿಂದಿ ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿದ್ದ ವಿಚಾರವನ್ನು ಗಂಭೀವಾಗಿ ಪರಿಗಣಿಸಿದ ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ ನೀಡಿದೆ. "ಆರೋಪಿ ಯಾರೇ ಆಗಿರಲಿ, ಆರೋಪಿ ಎಷ್ಟೇ ದೊಡ್ಡವನಿರಲಿ ಅಥವಾ ಚಿಕ್ಕವನಿರಲಿ, ಅವನು ಅಥವಾ ಅವಳು ಯಾರೇ ಇರಲಿ, ಕಾನೂನಿಗೆ ಒಂದೇ ಎಂಬ ಬಲವಾದ ಸಂದೇಶವನ್ನು ಈ ತೀರ್ಪು ನೀಡುತ್ತದೆ" ಎಂದು ನ್ಯಾಯಮೂರ್ತಿ ಪರ್ದಿವಾಲಾ ಹೇಳಿದ್ದರು. ಆರೋಪಿಗಳಿಗೆ 5 ಸ್ಟಾರ್ ಟೀಟ್‌ಮೆಂಟ್ ನೀಡಲಾಗುತ್ತಿದೆ ಎಂದು ನಮಗೆ ತಿಳಿದ ದಿನ, ಮೊದಲ ಹೆಜ್ಜೆಯೇ ಸೂಪರಿಂಟೆಂಡೆಂಟ್ ಮತ್ತು ಇತರ ಎಲ್ಲ ಅಧಿಕಾರಿಗಳನ್ನು ಅಮಾನತುಗೊಳಿಸುವುದು ಎಂದು ಸುಪ್ರೀಂ ಕೋರ್ಟ್ ವಾರ್ನಿಂಗ್ ನೀಡಿದೆ.



ದರ್ಶನ್ ಜೈಲಿನಲ್ಲಿ ಹೇಗಿರಬೇಕು?

ಜಾಮೀನು ರದ್ದಾದ ಬಳಿಕ ಪರಪ್ಪನ ಅಗ್ರಹಾರ ಕಾರಗೃಹದಲ್ಲಿರುವ ನಟ ದರ್ಶನ್‌ ಇತರೆ ವಿಚಾರಣಾಧೀನ ಕೈದಿಗಳಂತೆ ಇರಬೇಕಾಗುತ್ತದೆ. ಒಂದೇ ಪ್ರಕರಣದ ಎಲ್ಲಾ ಆರೋಪಿಗಳನ್ನು ಒಂದೇ ಸೆಲ್‌ನಲ್ಲಿ ಇಡುವುದಿಲ್ಲ. ಎಲ್ಲರನ್ನೂ ಪ್ರತ್ಯೇಕವಾಗಿ ಇರಿಸಲಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್‌ನ ವಕೀಲೆ ಸಹನಾ ಗೋಪಾಲ್ ಅವರು ಹೇಳಿದ್ದಾರೆ. ಅವರಿಗೆ ಯಾವುದೇ ವಿಐಪಿ ಸೌಲಭ್ಯಗಳು ಇರುವುದಿಲ್ಲ. ಮನೆಯಿಂದ ಊಟ ಕೊಡಬೇಕು ಎಂದಾದರೆ ಅದಕ್ಕೆ ಅನುಮತಿ ಪಡೆಯಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಓದಿ: Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ 262 ಸಾಕ್ಷಿ; ವಿಚಾರಣೆ ಮುಗಿಯಲು ಎಷ್ಟು ವರ್ಷ ಬೇಕು?

ಪೆರೋಲ್ ಮೇಲೆ ಬಂದು ನಟಿಸಬಹುದಾ?

ಹೈಕೋರ್ಟ್‌ನಿಂದ ಜಾಮೀನು ಪಡೆದಿದ್ದ ನಟ ದರ್ಶನ್ ಡೆವಿಲ್ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸುವ ಹೊತ್ತಿಗೆ ಚಿತ್ರದ ಸಂಪೂರ್ಣ ಪೂರ್ಣಗೊಂಡಿದ್ದು ಬಿಡುಗಡೆಗೆ ತಯಾರಿ ಮಾಡಲಾಗುತ್ತದೆ. ಒಂದು ವೇಳೆ ನಟ ದರ್ಶನ್ ಪೆರೋಲ್ ಪಡೆದು ಹೊರಗಡೆ ಬಂದು ಸಿನಿಮಾದಲ್ಲಿ ನಟಿಸಬಹುದಾ ಎಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ವಕೀಲೆ ಸಹನಾ ಗೋಪಾಲ್ ಅವರು, ಈ ಪ್ರಕರಣದಲ್ಲಿ ಅವಕಾಶ ಕೊಡುವ ಸಾಧ್ಯತೆ ತುಂಬಾ ಕಡಿಮೆ ಎಂದು ಹೇಳಿದ್ದಾರೆ.

ನಟ ದರ್ಶನ್ ವಿರುದ್ಧ 302 ಪ್ರಕರಣ ದಾಖಲಾಗಿದ್ದು ಇದರ ಅಡಿಯಲ್ಲಿ ಅವರು ಅಪರಾಧಿ ಎಂದು ಸಾಭೀತಾದರೆ ಮರಣದಂಡನೆ, ಜೀವಾವಧಿ ಶಿಕ್ಷೆಯನ್ನೂ ಕೊಡಬಹುದು ಎಂದು ಎಂದು ವಕೀಲೆ ತಿಳಿಸಿದ್ದಾರೆ. ಜಾಮೀನು ಸಿಗದಿದ್ದರೆ ವಿಚಾರಣೆ ಮುಗಿದು ತೀರ್ಪು ನೀಡುವವರೆಗೂ ನಟ ದರ್ಶನ್ ಜೈಲಿನಲ್ಲೇ ಇರಬೇಕಾಗುತ್ತದೆ ಎಂದು ಸಹನಾ ಗೋಪಾಲ್ ತಿಳಿಸಿದ್ದಾರೆ.