Friday, 13th December 2024

ನಮ್ಮೆಲ್ಲರ ಮನಗಳಲ್ಲಿ ಅಂಬಿ ಅಪ್ಪಾಜಿ ಸದಾ ಚಿರಸ್ಥಾಯಿ: ಚಾಲೆಂಜಿಂಗ್ ಸ್ಟಾರ್

ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಅವರನ್ನು ಕಳೆದುಕೊಂಡು ಇಂದಿಗೆ ಎರಡು ವರ್ಷ ಸಂದಿವೆ. 2018 ನವೆಂಬರ್ 24 ರಂದು ನಿಧನರಾಗಿದ್ದು, ಅವರ ಎರಡನೇ ವರ್ಷದ ಪುಣ್ಯಸ್ಮರಣೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾಮಾಜಿಕ ಜಾಲತಾಣದಲ್ಲಿ ಕೆಲ ಸಾಲುಗಳನ್ನು ಬರೆದುಕೊಳ್ಳುವ ಮೂಲಕ ಅವರನ್ನು ಸ್ಮರಿಸಿದ್ದಾರೆ.

ನನ್ನ ಪ್ರೀತಿಯ ಸೀನಿಯರ್ ಅಂಬಿ ಅಪ್ಪಾಜಿ, ಇಂದಿಗೆ ದೈಹಿಕವಾಗಿ ಅಗಲಿ 2 ಸಂವತ್ಸರಗಳು ಕಳೆದಿವೆ. ನಮ್ಮೆಲ್ಲರ ಮನಗಳಲ್ಲಿ ಸದಾ ಚಿರಸ್ಥಾಯಿಯಾಗಿ ಉಳಿದಿದ್ದಾರೆ. ಅವರ ನೇರ ನುಡಿಯ ವ್ಯಕ್ತಿತ್ವ, ಮಾಡಿರುವ ಸಹೃದಯಿ ಕಾರ್ಯಗಳು ಸದಾ ಕನ್ನಡಿಗರ ಮನಸ್ಸಿನಲ್ಲಿ ಜೀವಂತವಾಗಿರುತ್ತವೆ ಎಂದು ಬರೆದುಕೊಂಡಿದ್ದಾರೆ.

ನನ್ನ ಪ್ರೀತಿಯ ಸೀನಿಯರ್ ಅಂಬಿ ಅಪ್ಪಾಜಿ ಇಂದಿಗೆ ದೈಹಿಕವಾಗಿ ಅಗಲಿ. ಎರಡು ಸಂವತ್ಸರಗಳು ಕಳೆದಿವೆ. ಆದರೆ ನಮ್ಮೆಲರ ಮನಗಳಲ್ಲಿ ಸದಾ ಚಿರಸ್ಥಾಯಿಯಾಗಿ ಉಳಿದಿದ್ದಾರೆ. ಅವರ ನೇರನುಡಿಯ ವ್ಯಕ್ತಿತ್ವ, ಮಾಡಿರುವ ಸಹೃದಯಿ ಕಾರ್ಯಗಳು ಸದಾ ಕನ್ನಡಿಗರ ಮನಸ್ಸಲ್ಲಿ ಜೀವಂತವಾಗಿರುತ್ತವೆ