Thursday, 21st November 2024

ಸಾರ್ವಜನಿಕ ಆಕ್ರೋಶ ತೋರಿಸುವುದು ಸಮಸ್ಯೆಗೆ ಪರಿಹಾರವೇ?: ಕಿಚ್ಚ ಸುದೀಪ್

ಬೆಂಗಳೂರು:ಸಾರ್ವಜನಿಕ ವೇದಿಕೆಯಲ್ಲಿ ಅವರನ್ನು ಕೂಡ ಅವಮಾನ ಮಾಡುವುದು ನೋಡಿದರೆ ನಾವು ಕನ್ನಡಿಗರು ಇಂತಹ ಅನ್ಯಾಯದ ಪ್ರತಿಕ್ರಿಯೆ ಎದುರಿಸಬೇಕೆ ಎಂಬ ಪ್ರಶ್ನೆ ಮೂಡುತ್ತಿದೆ. ಈ ರೀತಿ ಸಾರ್ವಜನಿಕ ಆಕ್ರೋಶ ತೋರಿಸುವುದು ಸಮಸ್ಯೆಗೆ ಪರಿಹಾರವೇ ಎಂದು ಕಿಚ್ಚ ಸುದೀಪ್ ಪ್ರಶ್ನಿಸಿದ್ದಾರೆ.

ಬಳ್ಳಾರಿಯ ಹೊಸಪೇಟೆಯಲ್ಲಿ ಕ್ರಾಂತಿ ಚಿತ್ರದ ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ತುಂಬಿದ ಜನಜಂಗುಳಿ ಮಧ್ಯೆ ನಾಯಕ ನಟ ದರ್ಶನ್ ಮೇಲೆ ಚಪ್ಪಲಿ ಎಸೆದ ಘಟನೆ ಇಡೀ ಕನ್ನಡ ಚಿತ್ರರಂಗದವರನ್ನು ಘಾಸಿಗೊಳಿಸಿದೆ.

ಕಲಾವಿದರು ಈ ಘಟನೆಯನ್ನು ಖಂಡಿಸಿ ದರ್ಶನ್ ಪರ ನಿಂತಿದ್ದಾರೆ. ಹಲವು ಕಾರಣ ಗಳಿಂದ ದೂರಾದ ಕಿಚ್ಚ ಸುದೀಪ್ ಸಹ ಈ ಘಟನೆಯನ್ನು ಖಂಡಿಸಿ, ನಮ್ಮ ನೆಲ, ಭಾಷೆ ಮತ್ತು ಸಂಸ್ಕೃತಿ ಪ್ರೀತಿ ಮತ್ತು ಗೌರವವನ್ನು ಸಾರುತ್ತದೆ. ಇಲ್ಲಿ ಪ್ರತಿಯೊಂದು ಸಮಸ್ಯೆಗೆ ಪರಿಹಾರವಿದೆ. ಪ್ರತಿಯೊಬ್ಬ ವ್ಯಕ್ತಿಯೂ ಗೌರವದಿಂದ ನಡೆಸಿಕೊಳ್ಳಲು ಅರ್ಹರಿರುತ್ತಾರೆ. ತಾಳ್ಮೆಯಿಂದ ಮಾತುಕತೆ ಮೂಲಕ ಪ್ರತಿಯೊಂದು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳ ಬಹುದು. ಹೊಸಪೇಟೆಯಲ್ಲಿ ನಡೆದ ಘಟನೆಯ ವಿಡಿಯೊ ನೋಡಿದ ಮೇಲೆ ನನ್ನ ಮನಸ್ಸಿಗೆ ತೀರಾ ನೋವಾಗಿದೆ.

ದರ್ಶನ್ ವಿಚಾರದಲ್ಲಿ ಅವರ ಬಗ್ಗೆ ಪುನೀತ್ ಅಭಿಮಾನಿಗಳಿಗೆ ಬೇಸರ, ಅಸಮಾಧಾನ ಇರಬಹುದು. ಆದರೆ ಇಂತಹ ಪ್ರತಿಕ್ರಿಯೆ ನೀಡುವುದನ್ನು ಸ್ವತಃ ಪುನೀತ್ ಅವರೇ ಪ್ರೋತ್ಸಾಹಿಸುತ್ತಿದ್ದರೇ, ಪುನೀತ್ ಹೇಗಿದ್ದರು, ಅವರು ಹೇಗೆ ಬಾಳಿ ಬದುಕಿದ್ದರು ಎಂದು ಅವರ ಅಭಿಮಾನಿಗಳಿಗೆ ಚೆನ್ನಾಗಿ ಗೊತ್ತಿದೆ ಎಂದು ಭಾವಿಸುತ್ತೇನೆ ಎಂದು ಹೇಳಿ ಕಿಚ್ಚ ಮುಕ್ತಾಯಗೊಳಿಸಿದ್ದಾರೆ.

Read E-Paper click here