Saturday, 14th December 2024

ಸಲ್ಮಾನ್‌ ಖಾನ್‌ ಜೊತೆ ಪೂಜಾ ಡೇಟಿಂಗ್‌…!

ಮುಂಬೈ: ಕನ್ನಡತಿ ಪೂಜಾ ಹೆಗ್ಡೆ ಜೊತೆ ಸಲ್ಲು ಭಾಯ್‌ ಪ್ರೀತಿಯಲ್ಲಿ ಮುಳುಗಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಇವರಿ ಬ್ಬರು ಡೇಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ.

ಪೂಜಾ ಹೆಗ್ಡೆಗೆ ತಮ್ಮ ನಿರ್ಮಾಣ ಸಂಸ್ಥೆಯಲ್ಲಿ ಎರಡು ಚಿತ್ರಗಳಿಗೆ ಸಲ್ಲು ಸಹಿ ಹಾಕಿಸಿ ದ್ದಾರೆ. ಸದ್ಯ ಇಬ್ಬರೂ ಒಟ್ಟಿಗೆ ಕಾಲ ಕಳೆಯುತ್ತಿದ್ದಾರೆ. ಸಲ್ಮಾನ್ ಖಾನ್ ಆಪ್ತರು ಇದನ್ನು ಖಚಿತಪಡಿಸಿದ್ದಾರೆ.

ಪೂಜಾ ಹೆಗ್ಡೆ ಸದ್ಯ ಸಲ್ಮಾನ್ ಖಾನ್ ಚಿತ್ರದಲ್ಲಿ ನಟಿಸುತ್ತಿದ್ದಾರೆ. ʼಕಿಸಿ ಕಾ ಭಾಯ್ ಕಿಸಿ ಕಾ ಜಾನ್ʼ ಚಿತ್ರದಲ್ಲಿ ವಿಕ್ಟರಿ ವೆಂಕಟೇಶ್ ಮತ್ತು ಜಗಪತಿ ಬಾಬು ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ಪರ್ಹಾದ್ ಸಂಜಿ ನಿರ್ದೇಶಿಸು ತ್ತಿದ್ದಾರೆ.. ಸಲ್ಮಾನ್ ಖಾನ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಸಲ್ಮಾನ್ ನಿರ್ಮಿಸುತ್ತಿದ್ದಾರೆ.

ಆಯಕ್ಷನ್ ಕಾಮಿಡಿ ಎಂಟರ್‌ಟೈನರ್ ಸಿನಿಮಾ ಇದಾಗಿದೆ. ಹೊಸ ವರ್ಷದ ಉಡುಗೊರೆಯಾಗಿ ಡಿಸೆಂಬರ್ 30 ರಂದು ಚಿತ್ರವನ್ನು ಬಿಡುಗಡೆ ಮಾಡಲು ಪ್ಲಾನ್‌ ಮಾಡಲಾಗಿದೆ.