Monday, 16th September 2024

ಜೀವ ಬೆದರಿಕೆ: ದೂರು ದಾಖಲಿಸಿದ ಕತ್ರಿನಾ ಕೈಫ್, ವಿಕ್ಕಿ ಕೌಶಲ್

ಮುಂಬೈ: ನನಗೆ ಸಾಮಾಜಿಕ ಮಾಧ್ಯಮದಲ್ಲಿ ಜೀವ ಬೆದರಿಕೆ ಬಂದಿದೆ ಹಾಗೂ ತನ್ನ ಪತ್ನಿ ನಟಿ ಕತ್ರಿನಾ ಕೈಫ್ ಅವರನ್ನು ಆನ್‌ಲೈನ್‌ನಲ್ಲಿ ಹಿಂಬಾಲಿಸಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿ ಬಾಲಿವುಡ್ ನಟ ವಿಕ್ಕಿ ಕೌಶಲ್ ಮುಂಬೈನ ಸಾಂತಾಕ್ರೂಝ್ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.

ದೂರಿನ ಆಧಾರದ ಮೇಲೆ ಸಾಂತಾಕ್ರೂಝ್ ಪೊಲೀಸರು ಸೋಮವಾರ ಎಫ್‌ಐಆರ್ ದಾಖಲಿಸಿದ್ದಾರೆ.

ಸಾಂತಾಕ್ರೂಝ್ ಪೊಲೀಸ್ ಠಾಣೆಗೆ ಬಂದಿದ್ದು, ಒಬ್ಬ ವ್ಯಕ್ತಿ ತನ್ನ ಇನ್‌ಸ್ಟಾಗ್ರಾ ಮ್ ಖಾತೆಯಲ್ಲಿ ಬೆದರಿಕೆ ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದಾನೆ ಎಂದು ದೂರು ನೀಡಿದ್ದಾರೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದರು.

ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 506(2) (ಕೊಲೆ ಬೆದರಿಕೆ) ಹಾಗೂ 354-ಡಿ (ಹಿಂಬಾಲಿಸು ವುದು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.