Thursday, 12th December 2024

ಶ್ರೀದೇವಿ ವಿರುದ್ಧ ನಟಿ ಸಪ್ತಮಿ ಗೌಡ ಕುಟುಂಬಸ್ಥರ ಮಾನಹಾನಿ ಕೇಸ್‌

ಬೆಂಗಳೂರು: ಕಾಂತಾರ ಕ್ವೀನ್‌ ಸಪ್ತಮಿ ಗೌಡ ಜತೆ ಯುವ ರಾಜ್‌ಕುಮಾರ್‌ ಸಂಬಂಧ ಇದೆ ಎಂದು ನಟ ಯುವ ರಾಜ್‌ಕುಮಾರ್‌ ಪತ್ನಿ ಶ್ರೀದೇವಿ ಆರೋಪ ಮಾಡಿದ್ದರು. ಇದೀಗ ಶ್ರೀದೇವಿ ವಿರುದ್ಧ ತಿರುಗಿ ಬಿದ್ದಿರುವ ಸಪ್ತಮಿ ಗೌಡ ಕುಟುಂಬಸ್ಥರು ಮಾನಹಾನಿ ಕೇಸ್‌ ದಾಖಲಿಸಲು ಮುಂದಾಗಿದ್ದಾರೆ.

ನಟ ಯುವ ರಾಜ್‌ಕುಮಾರ್‌ ಅವರು ಪತ್ನಿ ಶ್ರೀದೇವಿ ಅವರಿಗೆ ವಿಚ್ಛೇದನ ನೀಡಲು ಮುಂದಾಗಿದ್ದಾರೆ.

ನಟ ಯುವ ರಾಜ್‌ಕುಮಾರ್‌ ಅವರು ಪತ್ನಿ ಶ್ರೀದೇವಿ ಭೈರಪ್ಪ ಅವರಿಗೆ ಡಿವೋರ್ಸ್ ನೋಟಿಸ್‌ ನೀಡಿದ ಬಳಿಕ ಇಬ್ಬರ ನಡುವಿನ ಆರೋಪ- ಪ್ರತ್ಯಾರೋಪಗಳು ಜಾಸ್ತಿಯಾಗಿವೆ. ಅದರಲ್ಲೂ, ಅನೈತಿಕ ಸಂಬಂಧಗಳ ಆರೋಪಗಳು ಇನ್ನೂ ಹೆಚ್ಚಾಗಿವೆ.

‘ಶ್ರೀದೇವಿ ಭೈರಪ್ಪ ಅವರು ರಾಧಯ್ಯ ಎಂಬ ವ್ಯಕ್ತಿ ಜತೆ ಅನೈತಿಕ ಸಂಬಂಧ ಹೊಂದಿದ್ದಾರೆ’ ಎಂಬುದಾಗಿ ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಸುದ್ದಿಗೋಷ್ಠಿ ನಡೆಸಿ ಆರೋಪಿಸಿದ್ದಾರೆ. ಇನ್ನು, ನಟನ ಲೀಗಲ್‌ ನೋಟಿಸ್‌ಗೆ ಉತ್ತರಿಸಿದ ಶ್ರೀದೇವಿ ಭೈರಪ್ಪ, ‘ಯುವ ರಾಜ್‌ಕುಮಾರ್‌ ನಟಿ ಸಪ್ತಮಿ ಗೌಡ ಜತೆ ಸಂಬಂಧ ಹೊಂದಿದ್ದಾರೆ’ ಎಂಬುದಾಗಿ ಆರೋಪಿಸಿದ್ದಾರೆ.

ಯುವ ರಾಜಕುಮಾರ್ ಹಾಗೂ ಸಪ್ತಮಿ ಗೌಡ ರೂಮ್‌ನಲ್ಲಿ ಇದ್ದರು ಎಂದು ಶ್ರೀದೇವಿ ಉಲ್ಲೇಖಿಸಿದ್ದರು ಎನ್ನಲಾಗಿದೆ. ಹೀಗಾಗಿ ಶ್ರೀದೇವಿ ವಿರುದ್ಧ ಮಾನ ಹಾನಿ ಕೇಸ್ ದಾಖಲಿಸುವ ಬಗ್ಗೆ ಸಪ್ತಮಿ ಗೌಡ ಕುಟುಂಬಸ್ಥರು ನಿರ್ಧರಿಸಿದ್ದಾರೆ ಎನ್ನಲಾಗಿದೆ.