Firefly Movie: ಫೈರ್ ಫ್ಲೈ’ ಚಿತ್ರದ ‘ಹುಷಾರು ಲೇ ಹುಷಾರು’ ಹಾಡು ಬಿಡುಗಡೆ ಮಾಡಿದ ಧ್ರುವ ಸರ್ಜಾ
ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ಫೈರ್ ಫ್ಲೈ(Firefly Movie) ಚಿತ್ರ ಇದೇ ತಿಂಗಳ 24ಕ್ಕೆ ತೆರೆಗೆ ಬರ್ತಿದ್ದು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.ಸಿನಿಮಾ ಬಿಡುಗಡೆ ಕೆಲ ದಿನಗಳಷ್ಟೇ ಬಾಕಿ ಉಳಿದಿದ್ದು, ಪ್ರಚಾರ ಬಿರುಸಿನಿಂದ ಸಾಗಿದೆ. ಅದರ ಭಾಗವಾಗಿ ಚಿತ್ರದ ಮತ್ತೊಂದು ಹಾಡನ್ನು ಬಿಡುಗಡೆ ಮಾಡಲಾಗಿದೆ. ಧ್ರುವ ಸರ್ಜಾ ಫೈರ್ ಫ್ಲೈ ಸಿನಿಮಾದ ಹುಷಾರು ಲೇ ಹುಷಾರು ಎಂಬ ಹಾಡನ್ನು ರಿಲೀಸ್ ಮಾಡಿ ಇದೀಗ ಇಡೀ ತಂಡಕ್ಕೆ ಶುಭಾಶಯ ಕೋರಿದ್ದಾರೆ.


ಬೆಂಗಳೂರು: ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ಫೈರ್ ಫ್ಲೈ ಚಿತ್ರ (Firefly) ಇದೇ ತಿಂಗಳ 24ಕ್ಕೆ ತೆರೆಗೆ ಬರ್ತಿದ್ದು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಚಿತ್ರದ ಟ್ರೇಲರ್ ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಆಗಿದ್ದು, ಟ್ರೈಲರ್ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಶಿವಣ್ಣ ಸಹ ಮಗಳ ಸಿನಿಮಾದಲ್ಲಿ ಮುಖ್ಯ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಸಿನಿಮಾ ಬಿಡುಗಡೆ ಕೆಲ ದಿನಗಳಷ್ಟೇ ಬಾಕಿ ಉಳಿದಿದ್ದು, ಪ್ರಚಾರ ಬಿರುಸಿನಿಂದ ಸಾಗಿದೆ. ಅದರ ಭಾಗವಾಗಿ ಚಿತ್ರದ ಮತ್ತೊಂದು ಹಾಡನ್ನು ಬಿಡುಗಡೆ ಮಾಡಲಾಗಿದೆ. ಧ್ರುವ ಸರ್ಜಾ ಫೈರ್ ಫ್ಲೈ ಸಿನಿಮಾದ ಹುಷಾರು ಲೇ ಹುಷಾರು ಎಂಬ ಹಾಡನ್ನು ರಿಲೀಸ್ ಮಾಡಿ ಇದೀಗ ಇಡೀ ತಂಡಕ್ಕೆ ಶುಭಾಶಯ ಕೋರಿದ್ದಾರೆ.
ನಾಯಕ ವಿಕ್ಕಿಯನ್ನು ಗುಣಗಾನ ಮಾಡುವ ಹಾಡು ಇದಾಗಿದೆ. ಈ ಗೀತೆಯಲ್ಲಿ ಅಣ್ಣಾವ್ರ ಸಿನಿಮಾಗಳ ಡೈಲಾಗ್ ಗಳನ್ನು ಬಳಸಿರುವುದು ಮತ್ತೊಂದು ವಿಶೇಷ. ಧನಂಜಯ್ ರಂಜನ್ ಕ್ಯಾಚಿ ಮ್ಯಾಚಿ ಪದಗಳನ್ನು ಪೊಣಿಸಿ ಅತ್ಯಂತ ಸುಂದರವಾಗಿ ಸಾಹಿತ್ಯ ವನ್ನು ಬರೆದಿದ್ದಾರೆ. ದೀಪಕ್ ಬ್ಲೂ ಮತ್ತು ಕಾರ್ತಿಕ್ ಚೆನ್ನೋಜಿರಾವ್ ಹಾಡಿಗೆ ಧ್ವನಿಯಾಗಿದ್ದು, ಚರಣ್ ರಾಜ್ ಮಸ್ತ್ ಟ್ಯೂನ್ ಹಾಕಿದ್ದಾರೆ.
ಇದನ್ನು ಓದಿ: Shivraj Kumar: ಕ್ಯಾನ್ಸರ್ನಿಂದ ಚೇತರಿಸಿಕೊಂಡು ಸರಿಗಮಪ ವೇದಿಕೆ ಮೇಲೆ ಧೂಳೆಬ್ಬಿಸಿದ ಶಿವಣ್ಣ: ವಿಡಿಯೋ
ತಾರಾಬಳಗದ ಮೂಲಕ ಗಮನ ಸೆಳೆದಿರುವ ಫೈರ್ ಫ್ಲೈ ಸಿನಿಮಾವನ್ನು ವಂಶಿ ನಟಿಸಿ, ನಿರ್ದೇಶಿಸಿದ್ದಾರೆ. ಇದು ಇವರ ಚೊಚ್ಚಲ ಪ್ರಯತ್ನ. ಚಿತ್ರದಲ್ಲಿ ಸುಧಾರಾಣಿ, ರಚನಾ ಇಂದರ್, ಅಚ್ಯುತ್ ಕುಮಾರ್, ಮೂಗು ಸುರೇಶ್, ಶೀತಲ್ ಶೆಟ್ಟಿ ಸೇರಿದಂತೆ ಮತ್ತಿತರರು ಅಭಿನಯಿಸಿದ್ದಾರೆ. ಒಂದೊಳ್ಳೆ ಕಾಡುವ ಕಥೆಯೊಂದಿಗೆ ಫೈರ್ ಫ್ಲೈ ಸಿನಿಮಾ ಏಪ್ರಿಲ್ 24ಕ್ಕೆ ತೆರೆಗೆ ಬರ್ತಿದೆ.
ವಿಶೇಷ ಎಂದರೆ ಮಗಳ ನಿರ್ಮಾಣದಲ್ಲಿ ಶಿವಣ್ಣ ಕೂಡ ನಟಿಸಿದ್ದಾರೆ. ಶಿವಣ್ಣ ಇಲ್ಲಿ ದಿ ಕಿಂಗ್ಸ್ ಪಿಜ್ಜಾ ಬಾಯ್ ಆಗಿದ್ದಾರೆ. ಜಯರಾಮ್ ಶ್ರೀನಿವಾಸ್ ಹಾಗೂ ಹ್ಯಾಪಿ ಹನುಮಂತ್ ಅವರ ಸಹ- ನಿರ್ದೇಶನ ಈ ಚಿತ್ರಕ್ಕಿದೆ. ಅಭಿಲಾಷ್ ಕಳತ್ತಿ ಛಾಯಾಗ್ರಹಣ, ರಘು ನಿಡುವಳ್ಳಿ ಅವರ ಸಂಭಾಷಣೆ, ಸುರೇಶ್ ಆರ್ಮುಗಮ್ ಅವರ ಸಂಕಲನ, ವರದರಾಜ್ ಕಾಮತ್ ಅವರ ಕಲೆ, ಅರ್ಜುನ್ ರಾಜ್ ಅವರ ಸಾಹಸ, ರಾಹುಲ್ ಮಾಸ್ಟರ್ ಅವರ ನೃತ್ಯ ಸಂಯೋಜನೆ ಫೈರ್ ಫ್ಲೈ ಸಿನಿಮಾಕ್ಕಿದೆ.