Sunday, 15th December 2024

ನಟ ದಿಗಂತ್ ಡಿಸ್ಚಾರ್ಜ್‌: ಮೂರು ತಿಂಗಳು ರೆಸ್ಟ್

ಬೆಂಗಳೂರು: ನಟ ದಿಗಂತ್ ಗೋವಾದಲ್ಲಿ ಪಲ್ಟಿ ಹೊಡೆಯುವಾಗ ಗಾಯಗೊಂಡು, ಬೆಂಗಳೂರಿನ ಹಳೆ ಮದ್ರಾಸ್ ರಸ್ತೆ ಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಬುಧವಾರ ರಾತ್ರಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ನಟ ದಿಗಂತ್ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಮುಂದಿನ ಮೂರು ತಿಂಗಳು ಶೂಟಿಂಗ್ ನಲ್ಲಿ ಪಾಲ್ಗೊಳ್ಳದೇ ಮನೆಯಲ್ಲೇ ರೆಸ್ಟ್ ಮಾಡುವಂತೆ ವೈದ್ಯರು ಸೂಚನೆ ನೀಡಿದ್ದಾರೆ.

ಗೋವಾದಲ್ಲಿ ಸಮ್ಮರ್ ಸಾಲ್ಟ್ ಮಾಡುವ ವೇಳೆ ಅವರ ಕುತ್ತಿಗೆಗೆ ತೀವ್ರ ಪೆಟ್ಟಾಗಿತ್ತು. ಕೂಡಲೇ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲಾಗಿತ್ತು.

ಇಲ್ಲಿ ಶಸ್ತ್ರಚಿಕಿತ್ಸೆ ಬಳಿಕ ಚೇತರಿಸಿಕೊಂಡ ದಿಗಂತ್ ಅವರನ್ನು ಬುಧವಾರ ಡಿಸ್ಚಾರ್ಜ್ ಮಾಡಲಾಗಿದೆ.