ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದಿಗಂತ್ ಗೆ ಸಿಸಿಬಿ ವಿಚಾರಣೆಗೆ ಹಾಜರಾಗುವಂತೆ ಮತ್ತೊಮ್ಮೆ ನೋಟಿಸ್ ನೀಡಿದೆ.
ಇಂದು 11 ಗಂಟೆಗೆ ಸಿಸಿಬಿ ಅಧಿಕಾರಿ ಪುನೀತ್ ಎದುರು ವಿಚಾರಣೆಗೆ ಹಾಜರಾಗುವಂತೆ ನಟ ದಿಗಂತ್ ಗೆ ಸೂಚನೆ ನೀಡಲಾಗಿದೆ. ಡ್ರಗ್ಸ್ ಪ್ರಕರಣ ಸಂಬಂಧ ಕಳೆದ ಸೆ. 16 ರಂದು ದಿಗಂತ್ ಹಾಗೂ ಪತ್ನಿ ಐಂದ್ರಿತಾ ವಿಚಾರಣೆಗೆ ಹಾಜರಾಗಿದ್ದರು.
ಸಿಸಿಬಿ ವಿಚಾರಣೆ ವೇಳೆ ಇಬ್ಬರ ಮೊಬೈಲ್ ವಶಕ್ಕೆ ಪಡೆದಿದ್ದ ಅಧಿಕಾರಿಗಳು ಸದ್ಯ ರಿಟ್ರೈವ್ ಆಗಿರುವ ಹಿನ್ನೆಲೆಯಲ್ಲಿ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಎರಡನೇ ಬಾರಿ ನೋಟಿಸ್ ನೀಡಿದೆ.