ಬಿಗ್​ಬಾಸ್ ಬಿಹಾರ ರಿಸಲ್ಟ್​ ಫೋಟೋ ಗ್ಯಾಲರಿ ಫ್ಯಾಷನ್​ ವಿಶ್ವವಾಣಿ ಪ್ರಾಪರ್ಟಿ ವಿದೇಶ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Rachita Ram: ನಟಿ ರಚಿತಾ ರಾಮ್‌ ವಿರುದ್ಧ ಫಿಲ್ಮ್‌ ಚೇಂಬರ್‌ಗೆ ನಿರ್ದೇಶಕ ನಾಗಶೇಖರ್‌ ದೂರು; ಕಾರಣವೇನು?

Rachita Ram: ನಾಗಶೇಖರ್ ನಿರ್ದೇಶನದ ಸಂಜು ವೆಡ್ಸ್ ಗೀತಾ 2 ಸಿನಿಮಾದಲ್ಲಿ ರಚಿತಾ ರಾಮ್ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾ ರಿಲೀಸ್ ಆಗುವ ಮುನ್ನ ಮತ್ತು ನಂತರ ಸಂಜು ವೆಡ್ಸ್ ಗೀತಾ 2 ಸಿನಿಮಾ ಪ್ರಚಾರಕ್ಕೆ ರಚಿತಾ ಭಾಗಿಯಾಗಿಲ್ಲ ಎಂದು ನಿರ್ದೇಶಕ ನಾಗಶೇಖರ್‌ ಅಸಮಾಧಾನ ಹೊರಹಾಕಿದ್ದಾರೆ.

ನಟಿ ರಚಿತಾ ರಾಮ್‌ ವಿರುದ್ಧ ಫಿಲ್ಮ್‌ ಚೇಂಬರ್‌ಗೆ ನಿರ್ದೇಶಕ ನಾಗಶೇಖರ್‌ ದೂರು

-

Prabhakara R
Prabhakara R Jun 17, 2025 7:00 PM

ಬೆಂಗಳೂರು: ನಟಿ ರಚಿತಾ ರಾಮ್ ವಿರುದ್ಧ ಕಲಾವಿದರ ಸಂಘ ಮತ್ತು ಫಿಲ್ಮ್ ಚೇಂಬರ್ ಕಠಿಣ ಕ್ರಮ ತಗೆದುಕೊಳ್ಳಬೇಕು ಎಂದು ಸಂಜು ವೆಡ್ಸ್ ಗೀತಾ 2 (Sanju Weds Geetha 2) ಸಿನಿಮಾದ ನಿರ್ದೇಶಕ ನಾಗಶೇಖರ್ (Nagashekar) ಒತ್ತಾಯಿಸಿದ್ದಾರೆ. ಚಿತ್ರತಂಡದ ಜತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮಂಗಳವಾರ ತೆರಳಿದ್ದ ನಾಗಶೇಖರ್, ತಮ್ಮದೇ ಸಿನಿಮಾದ ನಾಯಕಿ ರಚಿತಾ ರಾಮ್ ವಿರುದ್ಧ ಫಿಲ್ಮ್ ಚೇಂಬರ್‌ಗೆ ದೂರು ಸಲ್ಲಿಸಿದರು. ರಚಿತಾ ರಾಮ್‌ ಅವರಿಂದ ಆಗಿರುವ ತೊಂದರೆ ಬಗ್ಗೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನಾಗಶೇಖರ್ ನಿರ್ದೇಶನದ ಸಂಜು ವೆಡ್ಸ್ ಗೀತಾ 2 ಸಿನಿಮಾದಲ್ಲಿ ರಚಿತಾ ರಾಮ್ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾ ರಿಲೀಸ್ ಆಗುವ ಮುನ್ನ ಮತ್ತು ನಂತರ ಸಂಜು ವೆಡ್ಸ್ ಗೀತಾ 2 ಸಿನಿಮಾ ಪ್ರಚಾರಕ್ಕೆ ರಚಿತಾ ಭಾಗಿಯಾಗಿಲ್ಲ. ಹಾಗಾಗಿ ನಟಿಯ ನಡೆಯ ವಿರುದ್ಧ ಚಿತ್ರತಂಡ ತಿರುಗಿ ಬಿದ್ದಿದ್ದು, ನಟಿ ಕಠಿಣ ಕ್ರಮ ತೆಗೆದುಕೊಳ್ಬೇಕು ಅಂತ ಆಗ್ರಹಿಸುತ್ತೇವೆ ಎಂದಿದ್ದಾರೆ.

ನಮ್ಮ ಸಿನಿಮಾ ಪ್ರಚಾರಕ್ಕೆ ರಚಿತಾ ರಾಮ್ ಸ್ವಲ್ಪವೂ ಸಪೋರ್ಟ್ ಕೊಟ್ಟಿಲ್ಲ. ರಾಕ್‌ಲೈನ್‌ ವೆಂಕಟೇಶ್ ಅವರು ಮನವೊಲಿಸಲು ಪ್ರಯತ್ನಿಸಿದರೂ ರಚಿತಾ ಒಪ್ಪಿಲ್ಲ. ರಮ್ಯಾ, ತಮನ್ನಾ ಎಲ್ಲರಿಗೂ ಸಿನಿಮಾ ಮಾಡಿದ್ದೀನಿ. ಆದರೆ ಇಂತಹ ಸಮಸ್ಯೆ ಯಾವ ನಟಿಯೂ ಕೊಟ್ಟಿಲ್ಲ. ಸಿನಿಮಾ ಇಷ್ಟು ದಿನ ಪ್ರದರ್ಶನ ಕಂಡರೂ ಒಂದು ದಿನವೂ ಸಪೋರ್ಟ್ ಕೊಟ್ಟಿಲ್ಲ. ಶಿವಣ್ಣ, ಉಪೇಂದ್ರ, ಸುದೀಪ್ ಅಂಥವ್ರೇ ಈ ಸಿನಿಮಾಗೆ ಸಪೋರ್ಟ್ ಕೊಟ್ಟಿದ್ದಾರೆ. ನಾವು ಪೇಮೆಂಟ್ ಕಮ್ಮಿ ಕೊಟ್ಟಿಲ್ಲ. ನಟಿ ರಚಿತಾ ರಾಮ್ ವಿರುದ್ಧ ಹಾಗೂ ಕನ್ನಡ ಸಿನಿಮಾಗೆ ಥಿಯೇಟರ್ ಸಮಸ್ಯೆ ಕುರಿತು ತುಂಬಾ ನಷ್ಟ ಅನುಭವಿಸಿದ್ದೇವೆ ಅಂತ ಫಿಲ್ಮ್ ಚೇಂಬರ್ಗೆ ನಿರ್ದೇಶಕ ನಾಗಶೇಖರ್ ಮತ್ತು ನಟ ಶ್ರೀನಗರ ಕಿಟ್ಟಿ ದೂರು ನೀಡಿದ್ದಾರೆ.

ಈ ಸುದ್ದಿಯನ್ನೂ ಓದಿ | Bollywood Movie: ಓಟಿಟಿಯಲ್ಲಿ ಲಭ್ಯವಿದ್ದರೂ ಕುಟುಂಬ ಸಮೇತ ವೀಕ್ಷಿಸಲು ಸೂಕ್ತವಲ್ಲದ ಬಾಲಿವುಡ್ ಸಿನಿಮಾಗಳಿವು

ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್ ಕಾಂಬಿನೇಷನ್‌ನಲ್ಲಿ ಸಂಜು ವೆಡ್ಸ್ ಗೀತಾ 2 ಸಿನಿಮಾ ಮೂಡಿ ಬಂದಿದ್ದು, ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಛಲವಾದಿ ಕುಮಾರ್ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ರಾಗಿಣಿ ದ್ವಿವೇದಿ ಸೇರಿ ಹಲವು ಕಲಾವಿದರು ತಾರಾ ಬಳಗದಲ್ಲಿದ್ದಾರೆ.

‘ಫಿನಿಕ್ಸ್’ ಚಿತ್ರದ ಚಿತ್ರೀಕರಣದ ವೇಳೆ ಅವಘಡ; ನಟ ಭಾಸ್ಕರ್ ಶೆಟ್ಟಿ ಕಾಲಿಗೆ ಗಾಯ

Phoenix Movie

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ನಿರ್ದೇಶಕ ಓಂಪ್ರಕಾಶ್ ರಾವ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಫಿನಿಕ್ಸ್’ ಚಿತ್ರದ (Phoenix Movie)‌ ಚಿತ್ರೀಕರಣ ಬೆಂಗಳೂರಿನ ವಡೇರಹಳ್ಳಿಯಲ್ಲಿ ನಡೆಯುತ್ತಿದೆ. ಸಾಹಸ ಸನ್ನಿವೇಶದ ಚಿತ್ರೀಕರಣ ನಡೆಯುತ್ತಿರುವ ಈ ಸಂದರ್ಭದಲ್ಲಿ ಭಾರೀ ಅನಾಹುತವೊಂದು ನಡೆದಿದೆ. ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ನಟ ಭಾಸ್ಕರ್ ಶೆಟ್ಟಿ ಅವರ ಕಾಲಿಗೆ ಬೆಂಕಿ ತಗುಲಿದೆ. ಆದರೆ ಅಲ್ಲಿದ್ದವರ ಸಮಯ ಪ್ರಜ್ಞೆಯಿಂದ ಅವರು ಅಪಾಯದಿಂದ ಪಾರಾಗಿದ್ದಾರೆ. ಆದರೆ ಕಾಲಿಗೆ ಪೆಟ್ಟಾಗಿದ್ದು ಭಾಸ್ಕರ್ ಶೆಟ್ಟಿ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಪ್ರಸ್ತುತ ‘ಫಿನಿಕ್ಸ್’ ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ.

‘ಫಿನಿಕ್ಸ್’ ಚಿತ್ರದಲ್ಲಿ ನಾನು ಪೊಲೀಸ್ ಅಧಿಕಾರಿ ಪಾತ್ರ ನಿರ್ವಹಿಸುತ್ತಿದ್ದೇನೆ. ವಿಲನ್ ಅನ್ನು ಹಿಡಿಯಲು ನಾನು ಅವನಿರುವ ಸ್ಥಳಕ್ಕೆ ಹೋಗುತ್ತೇನೆ. ಆಗ ಅಲ್ಲಿದವರು ನನ್ನ ಮೇಲೆ ಪೆಟ್ರೋಲ್ ಬಾಂಬ್ ಎಸೆಯುವ ಸನ್ನಿವೇಶದ ಚಿತ್ರೀಕರಣದ ಸಂದರ್ಭ. ಈ ಸಂದರ್ಭದಲ್ಲಿ ನನ್ನ ಕಾಲಿಗೆ ಪೆಟ್ಟಾಯಿತು. ತಕ್ಷಣ ಚಿತ್ರತಂಡದವರು ನನ್ನನ್ನು ಆರೈಕೆ ಮಾಡಿ ಆಸ್ಪತ್ರೆಗೆ ಕರೆದುಕೊಂಡು ಹೋದರು. ಚಿತ್ರದ ನಿರ್ಮಾಪಕರು ಹಾಗೂ ನಿರ್ದೇಶಕರೂ ಆಗಿರುವ ಓಂಪ್ರಕಾಶ್ ರಾವ್ ಅವರು ಸಹ ನನ್ನ ವಿಶೇಷ ಕಾಳಜಿ ಬಗ್ಗೆ ವಹಿಸಿದ್ದರು.‌ ಅವರಿಗೆ ಹಾಗೂ ಚಿತ್ರತಂಡದವರಿಗೆ ಧನ್ಯವಾದ ತಿಳಿಸುತ್ತೇನೆ ಎನ್ನುತ್ತಾರೆ ನಟ ಭಾಸ್ಕರ್ ಶೆಟ್ಟಿ ‌

ಶ್ರೀಗುರು ಚಿತ್ರಾಲಯ ಲಾಂಛನದಲ್ಲಿ ತ್ರಿಶಾ ಪ್ರಕಾಶ್ ಅವರು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ‘ಫಿನಿಕ್ಸ್’ ಓಂಪ್ರಕಾಶ್ ರಾವ್ ನಿರ್ದೇಶನದ 49 ನೇ ಚಿತ್ರ. ಇದೊಂದು ಮಹಿಳಾ ಪ್ರಾಧಾನ ಚಿತ್ರವಾಗಿದ್ದು, ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿದೆ. ಭಾಸ್ಕರ್ ಶೆಟ್ಟಿ, ನಿಮಿಕಾ ರತ್ನಾಕರ್,‌ ಕಾಕ್ರೋಜ್ ಸುಧೀ, ಪ್ರಸನ್ನ ಮುಂತಾದವರು ತಾರಾಬಳಗದಲ್ಲಿದ್ದಾರೆ. ‌

ಈ ಸುದ್ದಿಯನ್ನೂ ಓದಿ | Monsoon Lipsticks 2025: ಮಾನ್ಸೂನ್‌ಗೆ ಕಾಲಿಟ್ಟ ವೈವಿಧ್ಯಮಯ ವಾಟರ್ ಪ್ರೂಫ್ ಲಿಪ್‌ಸ್ಟಿಕ್ಸ್

ರವಿ ವಲ್ಲೂರಿ ಛಾಯಾಗ್ರಹಣ, ರವಿವರ್ಮ ಸಾಹಸ ನಿರ್ದೇಶನವಿರುವ ಈ ಚಿತ್ರಕ್ಕೆ ದಕ್ಷಿಣ ಭಾರತದ ಹೆಸರಾಂತ ಸಂಗೀತ ನಿರ್ದೇಶಕರೊಬ್ಬರು ಸಂಗೀತ ಸಂಯೋಜಿಸಲಿದ್ದಾರೆ.