Just Married Movie: ‘ಜಸ್ಟ್ ಮ್ಯಾರೀಡ್’ ಚಿತ್ರದ ‘ಕರುಣಾಕರ’ ಪಾತ್ರದಲ್ಲಿ ಖ್ಯಾತ ನಟ ಅಚ್ಯುತ್ ಕುಮಾರ್
Just Married Movie: ಸಿ.ಆರ್.ಬಾಬಿ ಅವರೇ ಮೊದಲ ಬಾರಿಗೆ ನಿರ್ದೇಶಿಸಿರುವ, ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ʼಜಸ್ಟ್ ಮ್ಯಾರೀಡ್ʼ ಚಿತ್ರದ ಪ್ರಮುಖ ಪಾತ್ರದಲ್ಲಿ ಅಚ್ಯುತ್ ಕುಮಾರ್ ಅವರು ಅಭಿನಯಿಸಿದ್ದಾರೆ. ಇವರ ಪಾತ್ರ ಪರಿಚಯದ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ.


ಬೆಂಗಳೂರು: ಸಂಗೀತ ಸಂಯೋಜಕರಾಗಿ ಭಾರತದಾದ್ಯಂತ ಹೆಸರು ಮಾಡಿರುವ ಖ್ಯಾತ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್. ಬಾಬಿ ಅವರು abbs studios ಲಾಂಛನದಲ್ಲಿ ನಿರ್ಮಿಸಿರುವ, ಸಿ.ಆರ್.ಬಾಬಿ ಅವರೇ ಮೊದಲ ಬಾರಿಗೆ ನಿರ್ದೇಶಿಸಿರುವ ಹಾಗೂ ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ ʼಜಸ್ಟ್ ಮ್ಯಾರೀಡ್ʼ ಚಿತ್ರ (Just Married Movie) ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಭಾರತ ಚಿತ್ರರಂಗದ ಹೆಸರಾಂತ ಕಲಾವಿದರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಅಚ್ಯುತ್ ಕುಮಾರ್ ಅವರು ʼಜಸ್ಟ್ ಮ್ಯಾರೀಡ್ʼ ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದಾರೆ.
ʼಜಸ್ಟ್ ಮ್ಯಾರೀಡ್ʼ ಚಿತ್ರದಲ್ಲಿ ʼಕರುಣಾಕರʼ ಎಂಬ ಪಾತ್ರವನ್ನು ಅಚ್ಯುತ್ ಕುಮಾರ್ ನಿರ್ವಹಿಸಿದ್ದಾರೆ. ಅಚ್ಯುತ್ ಕುಮಾರ್ ಅವರ ಪಾತ್ರ ಪರಿಚಯದ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ.
‘ಜಸ್ಟ್ ಮ್ಯಾರೀಡ್’ ಚಿತ್ರದ ‘ಶಿಶುಪಾಲ’ ಪಾತ್ರದಲ್ಲಿ ದಕ್ಷಿಣ ಭಾರತದ ಖ್ಯಾತ ನಟ ಶ್ರೀಮನ್
ಬೆಂಗಳೂರು: ಭಾರತದ ಜನಪ್ರಿಯ ಸಂಗೀತ ಸಂಯೋಜಕ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್. ಬಾಬಿ ಅವರು abbs studios ಲಾಂಛನದಲ್ಲಿ ನಿರ್ಮಿಸಿರುವ, ಸಿ.ಆರ್. ಬಾಬಿ ಅವರೇ ಮೊದಲ ಬಾರಿಗೆ ನಿರ್ದೇಶಿಸಿರುವ ಹಾಗೂ ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ ʼಜಸ್ಟ್ ಮ್ಯಾರೀಡ್ʼ ಚಿತ್ರದಲ್ಲಿ ಕನ್ನಡ ಹಾಗೂ ಭಾರತೀಯ ಚಿತ್ರರಂಗದ ಹೆಸರಾಂತ ಕಲಾವಿದರು ಅಭಿನಯಿಸಿದ್ದಾರೆ. ತೆಲುಗು, ತಮಿಳು ಭಾಷೆಗಳ ಅನೇಕ ಜನಪ್ರಿಯ ಚಿತ್ರಗಳಲ್ಲಿ ನಟಿಸಿ ಜನಮನಸೂರೆಗೊಂಡಿರುವ ದಕ್ಷಿಣ ಭಾರತದ ಖ್ಯಾತ ನಟ ಶ್ರೀಮನ್ ಅವರು ಸಹ ʼಜಸ್ಟ್ ಮ್ಯಾರೀಡ್ʼ ಚಿತ್ರದ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. "ಶಿಶುಪಾಲ" ಪಾತ್ರದಲ್ಲಿ ಶ್ರೀಮನ್ ಅವರು ಅಭಿನಯಿಸಿದ್ದು, ಅವರ ಪಾತ್ರ ಪರಿಚಯದ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ.
ಇತ್ತೀಚೆಗಷ್ಟೇ ಡೈನಾಮಿಕ್ ಸ್ಟಾರ್ ದೇವರಾಜ್ ಅವರ ಪಾತ್ರದ ಕುರಿತು ಸಹ ಚಿತ್ರತಂಡ ಮಾಹಿತಿ ನೀಡಿತ್ತು. ಭಾರತೀಯ ಚಿತ್ರರಂಗದ ಜನಪ್ರಿಯ ಹಾಗೂ ಅನುಭವಿ ಕಲಾವಿದರು ಸಂಗಮದಲ್ಲಿ ಮೂಡಿಬಂದಿರುವ ʼಜಸ್ಟ್ ಮ್ಯಾರೀಡ್ʼ ಚಿತ್ರವನ್ನು ಆದಷ್ಟು ಬೇಗ ತೆರೆಯ ಮೇಲೆ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಈ ಸುದ್ದಿಯನ್ನೂ ಓದಿ | Monsoon jewel Fashion 2025: ಮಾನ್ಸೂನ್ ಫ್ಯಾಷನ್ ಜ್ಯುವೆಲರಿಯಲ್ಲಿ ಮಿನಿ ಛತ್ರಿಗಳ ಹಂಗಾಮ!