Sunday, 15th December 2024

ನಿರ್ಮಾಪಕ ಕೆ.ಮಂಜು ವಿರುದ್ಧ ಎಫ್‌ಐಆರ್

ಬೆಂಗಳೂರು: ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಕೆ.ಮಂಜು ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ನಿರ್ಮಾಪಕ ಪುಟ್ಟರಾಜು ಎಂಬವರು ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಕೆ.ಮಂಜು ಹಾಗೂ ಇನ್ನೋರ್ವ ಆರೋಪಿ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದಾರೆ. 2018ರಲ್ಲಿಯೇ ನಿರ್ಮಾಪಕ ಕೆ.ಮಂಜು 1.10 ಕೋಟಿ ಹಣ ಪಡೆದಿದ್ದಾರೆ. ಇನ್ನೋರ್ವ ಆರೋಪಿ ರಾಜಗೋಪಾಲ್ 68 ಲಕ್ಷ ಹಣ ಪಡೆದು ವಂಚಿಸಿದ್ದಾರೆ. ಹಣ ವಾಪಸ್ ನೀಡುವಂತೆ ಕೇಳಿದರೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರಿದ್ದಾರೆ.

ದೂರಿನ ಹಿನ್ನೆಲೆಯಲ್ಲಿ ನಿರ್ಮಾಪಕ ಕೆ.ಮಂಜು ವಿರುದ್ಧ ಐಪಿಸಿ ಸೆಕ್ಷನ್ 420, 506 ಹಾಗೂ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.