ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Peddi Movie: ಮತ್ತೊಮ್ಮೆ ರಗಡ್‌ ಅವತಾರದಲ್ಲಿ ಗ್ಲೋಬಲ್‌ ಸ್ಟಾರ್‌ ರಾಮ್‌ ಚರಣ್‌; ಶಿವಣ್ಣ ಜತೆಗಿನ ‘ಪೆದ್ದಿ’ ಚಿತ್ರದ ಗ್ಲಿಂಪ್ಸ್ ಔಟ್

ರಾಷ್ಟ್ರ ಪ್ರಶಸ್ತಿ ವಿಜೇತ ಬುಚ್ಚಿ ಬಾಬು ಸನ ನಿರ್ದೇಶನದ, ಟಾಲಿವುಡ್‌ ಸ್ಟಾರ್‌ ರಾಮ್‌ ಚರಣ್‌ ನಟನೆಯ ʼಪೆದ್ದಿʼ ತೆಲುಗು ಚಿತ್ರದ ಫಸ್ಟ್ ಝಲಕ್ ರಿಲೀಸ್ ಆಗಿದೆ. ಜತೆಗೆ ಬಿಡುಗಡೆ ದಿನಾಂಕ ಕೂಡ ರಿವೀಲ್ ಮಾಡಲಾಗಿದೆ. ಈ ಫಸ್ಟ್ ಗ್ಲಿಂಪ್ಸ್ ವಿಡಿಯೊ ನೋಡಿದ ಅಭಿಮಾನಿಗಳಿಗೆ ಕಾತುರ ಹೆಚ್ಚಾಗಿದ್ದು ಸೋಶಿಯಲ್ ಮಿಡಿಯಾದಲ್ಲಿ ಹೊಸ ಟ್ರೆಂಡ್ ಸೃಷ್ಟಿಸುತ್ತಿದೆ. ಈ ಸಿನಿಮಾದಲ್ಲಿ ಕರುನಾಡ ಚಕ್ರವರ್ತಿ ಶಿವ ರಾಜ್‌ಕುಮಾರ್‌ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ರಾಮ್ ಚರಣ್ ‘ಪೆದ್ದಿ’ ಚಿತ್ರದ ಫಸ್ಟ್‌ ಶಾಟ್ ರಿಲೀಸ್‌

peddi movie

Profile Pushpa Kumari Apr 6, 2025 6:22 PM

ಹೈದರಾಬಾದ್‌: ಗ್ಲೋಬಲ್ ಸ್ಟಾರ್ ರಾಮ್ ಚರಣ್ (Ram Charan) ನಟನೆಯ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ 'ಪೆದ್ದಿ' ಚಿತ್ರ (Peddi Movie) ಬಹಳಷ್ಟು ಕುತೂಹಲ ಮೂಡಿಸಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ಬುಚ್ಚಿ ಬಾಬು ಸನ (Buchi Babu Sana) ನಿರ್ದೇಶನದ ಈ ಚಿತ್ರದ ಫಸ್ಟ್ ಲುಕ್ ಈಗಾಗಲೇ ಭಾರೀ ಸದ್ದು ಮಾಡಿದೆ. ಇದೀಗ ಚಿತ್ರತಂಡ ರಾಮನವಮಿ ಪ್ರಯುಕ್ತ ಫಸ್ಟ್ ಝಲಕ್ ರಿಲೀಸ್ ಮಾಡಿದ್ದು, ಬಿಡುಗಡೆ ದಿನಾಂಕ ಕೂಡ ರಿವೀಲ್ ಮಾಡಲಾಗಿದೆ. ಈ ಫಸ್ಟ್ ಗ್ಲಿಂಪ್ಸ್ ವಿಡಿಯೊ ನೋಡಿದ ಅಭಿಮಾನಿಗಳಿಗೆ ಕಾತುರ ಹೆಚ್ಚಾಗಿದ್ದು ಸೋಶಿಯಲ್ ಮಿಡಿಯಾದಲ್ಲಿ ಹೊಸ ಟ್ರೆಂಡ್ ಸೃಷ್ಟಿಸುತ್ತಿದೆ.



ಪವರ್ ಫುಲ್ ಡೈಲಾಗ್ ಹೊಡೆಯುತ್ತಾ ಸಿಗರೇಟ್ ಬಾಯಲ್ಲಿ ಕಚ್ಚಿಕೊಂಡು ಭರ್ಜರಿ ಆ್ಯಕ್ಷನ್‌ ಮಾಡುತ್ತಾ ರಗಡ್ ಲುಕ್‌ನಲ್ಲಿ ರಾಮ್ ಚರಣ್ ಎಂಟ್ರಿ ಕೊಟ್ಟಿದ್ದಾರೆ. ಅವರ ಅಬ್ಬರ ನೋಡಿ ಫ್ಯಾನ್ಸ್ ʼಪೆದ್ದಿʼ ಮೇಲಿನ ನಿರೀಕ್ಷೆ ದುಪ್ಪಟ್ಟಾಗಿದೆ. ಚೆರ್ರಿ ಹುಟ್ಟುಹಬ್ಬದ ತಿಂಗಳಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದೆ. ಅಂದರೆ ಮುಂದಿನ ವರ್ಷದ ಮಾ. 27ಕ್ಕೆ ʼಪೆದ್ದಿʼ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಲಿದೆ.

ಇದನ್ನು ಓದಿ: Coolie Movie: ಸೂಪರ್​ ಸ್ಟಾರ್ ರಜನಿಕಾಂತ್‌ ಅಭಿಮಾನಿಗಳಿಗೆ ಗುಡ್​ನ್ಯೂಸ್; ʼಕೂಲಿ' ಚಿತ್ರದ ರಿಲೀಸ್ ಡೇಟ್ ಅನೌನ್ಸ್

ರಾಮ್ ಚರಣ್ ಗೆ ಜೋಡಿಯಾಗಿ ʼಪೆದ್ದಿʼಯಲ್ಲಿ ಜಾನ್ವಿ ಕಪೂರ್ ಅಭಿನಯಿಸುತ್ತಿದ್ದು, ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್, ಜಗಪತಿ ಬಾಬು, ದಿವ್ಯೆಂದು ಶರ್ಮಾ ತಾರಾ ಬಳಗದಲ್ಲಿದ್ದಾರೆ. ಮೈತ್ರಿ ಮೂವಿ ಮೇಕರ್ಸ್, ಸುಕುಮಾರ್ ರೈಟಿಂಗ್ ಹಾಗೂ ವೃದ್ಧಿ ಸಿನಿಮಾಸ್ ಚಿತ್ರ ತಯಾರಾಗು ತ್ತಿದ್ದು, ಎ.ಆರ್.ರೆಹಮಾನ್ ಸಂಗೀತ, ನವೀನ್ ನೂಲಿ‌ ಸಂಕಲನ, ಆರ್.ರತ್ನವೇಲು ಛಾಯಾಗ್ರಹಣ ಚಿತ್ರಕ್ಕಿದೆ.

ಮೊದಲ ಬಾರಿಗೆ ರಾಮ್‌ ಚರಣ್‌ ಮತ್ತು ಶಿವಣ್ಣ ತೆರೆ ಹಂಚಿಕೊಳ್ಳುತ್ತಿರುವ ಕಾರಣದಿಂದಲೇ ಈಗಾಗಲೇ ಸಿನಿಮಾ ಕುತೂಹಲ ಕೆರಳಿಸಿದೆ. ಕಥೆಗೆ ತಿರುವು ನೀಡುವ ಬಹುಮುಖ್ಯ ಪಾತ್ರದಲ್ಲಿ ಶಿವ ರಾಜ್‌ಕುಮಾರ್‌ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ಬಾಲಿವುಡ್‌ ಬೆಡಗಿ ಜಾಹ್ನವಿ ಕಪೂರ್‌ ಅವರಿಗೆ ಇದು 2ನೇ ತೆಲುಗು ಚಿತ್ರ. ಈ ಹಿಂದೆ ಅವರು ಜೂ.ಎನ್‌ಟಿಆರ್‌ ಜತೆಗೆ ʼದೇವರʼ ಸಿನಿಮಾದ ಮೂಲಕ ಟಾಲಿವುಡ್‌ಗೆ ಕಾಲಿಟ್ಟಿದ್ದರು.

ಈ ಸಿನಿಮಾದ ಕಥೆ ಉತ್ತರಾಂಧ್ರದ ಹಿನ್ನೆಲೆಯನ್ನು ಹೊಂದಿದೆ. ಗ್ರಾಮೀಣ ಸೊಗಡಿನ ಈ ಚಿತ್ರದಲ್ಲಿ ಅನೇಕ ಭಾವನಾತ್ಮಕ ದೃಶ್ಯಗಳಿವೆ ಎನ್ನಲಾಗಿದೆ. ಮೊದಲ ಹಂತದ ಚಿತ್ರೀಕರಣ 2024ರ ನವೆಂಬರ್‌ನಲ್ಲಿ ಮೈಸೂರಿನಲ್ಲಿ ಆರಂಭವಾಗಿದ್ದು, ಕೆಲವು ದಿನಗಳ ಹಿಂದೆ ಹೈದರಬಾದ್‌ನ ಶೆಡ್ಯೂಲ್‌ ಕೂಡ ಮುಕ್ತಾಯಗೊಂಡಿದೆ. ಇತ್ತೀಚೆಗೆ ತೆರೆಕಂಡ ʼಗೇಮ್‌ ಚೇಂಜರ್‌ʼ ಬಾಕ್ಸ್‌ ಆಫೀಸ್‌ನಲ್ಲಿ ಕಮಾಲ್‌ ಮಾಡುವಲ್ಲಿ ವಿಫಲವಾಗಿದ್ದರಿಂದ ರಾಮ್‌ ಚರಣ್‌ ʼಪೆದ್ದಿʼ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.