Forest Movie: 50 ದಿನ ಪೂರೈಸಿ ಶತದಿನೋತ್ಸವದತ್ತ ಸಾಗಿದ ʼಫಾರೆಸ್ಟ್ʼ ಚಿತ್ರ
Forest Movie: ಅಡ್ವೆಂಚರ್ಸ್ ಕಾಮಿಡಿ ಕಥಾಹಂದರವುಳ್ಳ ಹಾಗೂ ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು ಅವರಂಥ ಸ್ಟಾರ್ ಕಲಾವಿದರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಮಲ್ಟಿಸ್ಟಾರರ್ ʼಫಾರೆಸ್ಟ್ʼ ಚಿತ್ರ ಯಶಸ್ವಿ 50 ದಿನ ಪೂರೈಸಿ ಶತದಿನೋತ್ಸವದತ್ತ ಸಾಗುತ್ತಿದೆ. ಈ ಕುರಿತ ವಿವರ ಇಲ್ಲಿದೆ.


ಬೆಂಗಳೂರು: ಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ ಹಾಗೂ ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು ಅವರಂಥ ಸ್ಟಾರ್ ಕಲಾವಿದರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಮಲ್ಟಿಸ್ಟಾರರ್ ʼಫಾರೆಸ್ಟ್ʼ ಚಿತ್ರ (Forest Movie) ಯಶಸ್ವಿ 50 ದಿನಗಳನ್ನು ಪೂರೈಸಿ ಶತದಿನೋತ್ಸವದತ್ತ ಸಾಗುತ್ತಿದೆ. ಇತ್ತೀಚೆಗಷ್ಟೇ ಕಾಡಿನ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರ ಅಮೇಜಾನ್ ಪ್ರೈಮ್‌ನಲ್ಲೂ ಸಹ ಬಿಡುಗಡೆಯಾಗಿತ್ತು. ಅಲ್ಲೂ ಸಹ ಈ ಚಿತ್ರವನ್ನು ಅಧಿಕ ಸಂಖ್ಯೆಯ ಜನರು ವೀಕ್ಷಿಸುತ್ತಿದ್ದು ಮೆಚ್ಚುಗೆಯ ಮಹಾಪೂರವನ್ನೇ ಹರಿಸುತ್ತಿದ್ದಾರೆ. ಒಂದೊಳ್ಳೆ ಕಂಟೆಂಟ್‌ವುಳ್ಳ ಚಿತ್ರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡಬೇಕೆಂಬ ಹಂಬಲವಿರುವ ಎನ್.ಎಂ. ಕಾಂತರಾಜ್ ಅವರು ಎನ್.ಎಂ.ಕೆ. ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ʼಫಾರೆಸ್ಟ್ʼ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರದ ಯಶಸ್ಸಿಗೆ ಕಾರಣರಾದ ಚಿತ್ರತಂಡಕ್ಕೆ ಹಾಗೂ ಕನ್ನಡ ಕಲಾಭಿಮಾನಿಗಳಿಗೆ ನಿರ್ಮಾಪಕರು ಧನ್ಯವಾದ ತಿಳಿಸಿದ್ದಾರೆ.
ಚಂದ್ರಮೋಹನ್ ನಿರ್ದೇಶಿಸಿರುವ ಈ ಚಿತ್ರಕ್ಕೆ ಸತ್ಯಶೌರ್ಯ ಸಾಗರ್ ಹಾಗೂ ಚಂದ್ರಮೋಹನ್ ಕಥೆ, ಚಿತ್ರಕಥೆ ರಚಿಸಿದ್ದಾರೆ. ಸತ್ಯಶೌರ್ಯ ಸಾಗರ್ ಅವರೆ ಸಂಭಾಷಣೆಯನ್ನೂ ಬರೆದಿದ್ದಾರೆ. ಧರ್ಮವಿಶ್ ಸಂಗೀತ ನಿರ್ದೇಶನ, ಆನಂದ್‌ರಾಜಾ ವಿಕ್ರಮ್ ಅವರ ಹಿನ್ನೆಲೆ ಸಂಗೀತ, ರವಿಕುಮಾರ್ ಅವರ ಛಾಯಾಗ್ರಹಣ, ಅರ್ಜುನ್ ಕಿಟ್ಟು ಅವರ ಸಂಕಲನ, ಅಮರ್ ಅವರ ಕಲಾ ನಿರ್ದೇಶನ ಹಾಗೂ ಡಾ. ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
ಈ ಸುದ್ದಿಯನ್ನೂ ಓದಿ | Celebrities Ugadi Fashion: ಟ್ರೆಡಿಷನಲ್‌ವೇರ್‌ನಲ್ಲಿ ಯುಗಾದಿ ಹಬ್ಬ ಆಚರಿಸಿದ ಸೆಲೆಬ್ರೆಟಿಗಳಿವರು
ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು, ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ಅವಿನಾಶ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಾಣಂಜೆ, ಸೂರಜ್ ಪಾಪ್ಸ್, ಸುನೀಲ್ ಕುಮಾರ್ ಮುಂತಾದ ಹಿರಿಯ ಹಾಗೂ ಕಿರಿಯ ಕಲಾವಿದರು ʼಫಾರೆಸ್ಟ್ʼ ಚಿತ್ರದಲ್ಲಿ ಅಭಿನಯಿಸಿದ್ದಾರೆ.