Thursday, 3rd October 2024

ಪುನೀತ್‌ ನಟನೆಯ ‘ಗಂಧದ ಗುಡಿ’ ಫಸ್ಟ್‌ ಶೋ ಆರಂಭ

ಬೆಂಗಳೂರು: ರಾಜ್ಯಾದ್ಯಂತ ಶುಕ್ರವಾರ ಪುನೀತ್‌ ರಾಜ್‌ಕುಮಾರ್‌ ನಟನೆಯ ‘ಗಂಧದ ಗುಡಿ’ ಇಂದು ಬಿಡುಗಡೆಯಾಗುತ್ತಿದೆ. ಬೆಂಗಳೂರಿನ ಥಿಯೇಟರ್‌ಗಳಲ್ಲಿ ಫಸ್ಟ್‌ ಶೋ ಆರಂಭವಾಗಿದೆ.

ಇಂದು ಪುನೀತ್‌ ರಾಜ್‌ಕುಮಾರ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಎಲ್ಲರೂ ಗಂಧದ ಗುಡಿ ಸಾಕ್ಷ್ಯಾಚಿತ್ರ ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಎಲ್ಲಾ ಥಿಯೇಟರ್‌ಗಳ ಎದುರು ಪುನೀತ್‌ ರಾಜ್‌ಕುಮಾರ್‌ ಅವರ ಕಟೌಟ್‌ಗಳು ರಾರಾಜಿಸು ತ್ತಿದ್ದು, ಅಭಿಮಾನಿಗಳು ಅವುಗಳಿಗೆ ಹಾಲಿನ ಅಭಿಷೇಕ ಮಾಡುತ್ತಿದ್ದಾರೆ.

ಕರ್ನಾಟಕದಲ್ಲಿ 225ಕ್ಕೂಹೆಚ್ಚು ಸ್ಕ್ರೀನ್‌ಗಳಲ್ಲಿ ಚಿತ್ರ ರಿಲೀಸ್‌ ಆಗುತ್ತಿದೆ.