ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Geetha Shivarajkumar: ಗೀತಾ ಶಿವರಾಜ್‌ ಕುಮಾರ್‌ ಆಸ್ಪತ್ರೆಗೆ ದಾಖಲು, ಸರ್ಜರಿ

ಶಿವಣ್ಣ ಚೇತರಿಸಿಕೊಳ್ಳುತ್ತಿದ್ದಂತೆ ಸಿನಿಮಾ ಕೆಲಸಗಳಲ್ಲಿ ವ್ಯಸ್ತರಾಗಿದ್ದು, ಗೀತಾ ಶಿವರಾಜ್‌ಕುಮಾರ್‌ (Geetha Shivaraj Kumar) ಕೂಡ ಅವರಿಗೆ ಸಾಥ್‌ ನೀಡುತ್ತಿದ್ದರು. ಶಿವಣ್ಣ ಅವರ ಜೊತೆ ಗೀತಕ್ಕ ಕೂಡ ಸಿನಿಮಾ ಹಾಗೂ ಇತರ ಶೂಟಿಂಗ್‌ನಲ್ಲಿ ಭಾಗಿಯಾಗುತ್ತಿದ್ದರು. ಇದೀಗ ಗೀತಕ್ಕ ಅವರಿಗೆ ಸರ್ಜರಿ ಆಗಿದೆ ಎನ್ನುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

ಗೀತಾ ಶಿವರಾಜ್‌ ಕುಮಾರ್‌ ಆಸ್ಪತ್ರೆಗೆ ದಾಖಲು, ಸರ್ಜರಿ

ಗೀತಾ ಮತ್ತು ಶಿವರಾಜ್‌ ಕುಮಾರ್

ಹರೀಶ್‌ ಕೇರ ಹರೀಶ್‌ ಕೇರ Mar 26, 2025 9:03 AM

ಬೆಂಗಳೂರು: ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ (Geetha Shivraj kumar) ಅವರು ಸರ್ಜರಿಗಾಗಿ (Surgery) ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಎರಡು ದಿನಗಳ ಸರ್ಜರಿಯ ಬಳಿಕ ಗೀತಾ ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಮೆರಿಕದಲ್ಲಿಕ್ಯಾನ್ಸರ್‌ ಚಿಕಿತ್ಸೆಗೆ ಒಳಗಾಗಿದ್ದ ಪತಿ ಶಿವರಾಜ್‌ ಕುಮಾರ್‌ ಅವರ ಆರೈಕೆಯಲ್ಲಿ ತೊಡಗಿಸಿಕೊಂಡಿದ್ದ ಗೀತಾ, ಇದೀಗ ಸ್ವತಃ ಸರ್ಜರಿಗೆ ಒಳಗಾಗಿದ್ದು, ಈ ಕುರಿತು ಮಾಹಿತಿಯನ್ನು ಅವರ ಸಹೋದರ, ಸಚಿವ ಮಧು ಬಂಗಾರಪ್ಪ (Madhu Bangarappa) ನೀಡಿದ್ದಾರೆ.

ನಿನ್ನೆ (ಮಾರ್ಚ್ 25) ಮಂಗಳವಾರ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಬೃಹತ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, 'ಈ ಸಮಾರಂಭಕ್ಕೆ ನಾನು ಬೆಳಗ್ಗೆಯೇ ಬರಬೇಕಾಗಿತ್ತು. ಆದರೆ ಬರಲು ಆಗಲಿಲ್ಲ. ನಾನು ಮೊದಲೇ ಅನುಮತಿ ಪಡೆದುಕೊಂಡಿದ್ದೆ. ಗೀತಕ್ಕ ಅವರದ್ದು ಒಂದು ಸರ್ಜರಿ ಇತ್ತು. ನಿನ್ನೆ ಮತ್ತು ಇವತ್ತು ಎರಡು ದಿನ ಸರ್ಜರಿ ಇತ್ತು. ಈಗ ಅವರ ಸರ್ಜರಿ ಮುಗಿದಿದೆ. ಅವರ ಆರೋಗ್ಯ ಸುಧಾರಿಸಿದೆ. ನಾನು ಆಸ್ಪತ್ರೆಯಲ್ಲಿ ಇದ್ದೆ. ಈಗ ನೇರವಾಗಿ ಇಲ್ಲಿಗೆ ಬಂದಿದ್ದೇನೆ' ಎಂದಿದ್ದಾರೆ.

ಕೆಲವು ತಿಂಗಳ ಹಿಂದೆ ನಟ ಶಿವರಾಜ್‌ ಕುಮಾರ್ ಅವರ ಅನಾರೋಗ್ಯ ಆತಂಕವನ್ನು ಹುಟ್ಟಿಸಿತ್ತು. ಕೆಲವು ತಿಂಗಳು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದ ಅವರು ಬಳಿಕ ಶಸ್ತ್ರ ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಿದ್ದರು. ಡಿಸೆಂಬರ್ 24ರಂದು ಶಿವಣ್ಣಗೆ ಶಸ್ತ್ರ ಚಿಕಿತ್ಸೆ ಕೂಡ ಮಾಡಲಾಗಿತ್ತು. ಚಿಕಿತ್ಸೆ ಬಳಿಕ ಚೇತರಿಸಿಕೊಂಡ ಶಿವಣ್ಣ ಭಾರತಕ್ಕೆ ಬಂದು ಕೆಲ ದಿನಗಳು ಬೆಂಗಳೂರಿನಲ್ಲಿ ವಿಶ್ರಾಂತಿ ಪಡೆದು ಸಂಪೂರ್ಣವಾಗಿ ಗುಣಮುಖರಾಗಿದ್ದರು. ಶಿವಣ್ಣ ಚೇತರಿಸಿಕೊಳ್ಳುತ್ತಿದ್ದಂತೆ ಸಿನಿಮಾ ಕೆಲಸಗಳಲ್ಲಿ ವ್ಯಸ್ತರಾಗಿದ್ದು, ಗೀತಾ ಶಿವರಾಜ್‌ಕುಮಾರ್‌ ಕೂಡ ಅವರಿಗೆ ಸಾಥ್‌ ನೀಡುತ್ತಿದ್ದರು. ಶಿವಣ್ಣ ಅವರ ಜೊತೆ ಗೀತಕ್ಕ ಕೂಡ ಸಿನಿಮಾ ಹಾಗೂ ಇತರ ಶೂಟಿಂಗ್‌ನಲ್ಲಿ ಭಾಗಿಯಾಗುತ್ತಿದ್ದರು. ಇದೀಗ ಗೀತಕ್ಕ ಅವರಿಗೆ ಸರ್ಜರಿ ಆಗಿದೆ ಎನ್ನುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

ಇದನ್ನೂ ಓದಿ: Actor Shivarajkumar: ಮಂತ್ರಾಲಯಕ್ಕೆ ನಟ ಶಿವರಾಜ್‌ಕುಮಾರ್ ಕುಟುಂಬ ಭೇಟಿ; ರಾಯರಿಗೆ ವಿಶೇಷ ಪೂಜೆ