Green Movie: ರಾಜ್ ವಿಜಯ್ ನಿರ್ದೇಶನದ ‘ಗ್ರೀನ್’ ಚಿತ್ರ ಈ ವಾರ ತೆರೆಗೆ
Sandalwood News: ರಾಜ್ ವಿಜಯ್ ನಿರ್ದೇಶನದ ವಿಭಿನ್ನ ಕಥಾಹಂದರ ಹೊಂದಿರುವ ʼಗ್ರೀನ್ʼ ಚಿತ್ರ (Green Movie) ಈ ವಾರ ತೆರೆಗೆ ಬರುತ್ತಿದೆ. ಈಗಾಗಲೇ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಹಲವು ಪ್ರಶಸ್ತಿಗಳ ಜತೆಗೆ ಪ್ರಶಂಸೆಯನ್ನು ಈ ಚಿತ್ರ ಪಡೆದುಕೊಂಡಿದೆ.

-

ಬೆಂಗಳೂರು: ರಾಜ್ ವಿಜಯ್ ಹಾಗೂ ಬಿ.ಎನ್. ಸ್ವಾಮಿ ನಿರ್ಮಾಣದ ಹಾಗೂ ರಾಜ್ ವಿಜಯ್ ನಿರ್ದೇಶನದ ವಿಭಿನ್ನ ಕಥಾಹಂದರ ಹೊಂದಿರುವ ʼಗ್ರೀನ್ ಚಿತ್ರʼ (Green Movie) ಈ ವಾರ ತೆರೆಗೆ ಬರುತ್ತಿದೆ. ನಿಶಾಂತ್ ಎನ್.ಎನ್. ಒಡೆತನದ ಗುನಾದ್ಯ ಪ್ರೊಡಕ್ಷನ್ಸ್ ʼಗ್ರೀನ್ʼ ಚಿತ್ರವನ್ನು ತೆರೆಗೆ ತರಲು ಬೆನ್ನೆಲುಬಾಗಿ ನಿಂತಿದೆ. ಈಗಾಗಲೇ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಹಲವು ಪ್ರಶಸ್ತಿಗಳ ಜತೆಗೆ ಪ್ರಶಂಸೆಯನ್ನು ಈ ಚಿತ್ರ ಪಡೆದುಕೊಂಡಿದೆ.
ಗೋಪಾಲಕೃಷ್ಣ ದೇಶಪಾಂಡೆ, ಬಾಲಾಜಿ ಮನೋಹರ್, ಆರ್.ಜೆ. ವಿಕ್ಕಿ, ವಿಶ್ವನಾಥ್ ಮಾಂಡಲಿಕ, ಶಿವ ಮಂಜು, ಡಿಂಪಿ ಫದ್ಯಾ ಹಾಗೂ ಮುಂತಾದವರು ಅಭಿನಯಿಸಿರುವ ಈ ಚಿತ್ರಕ್ಕೆ ಕೆ. ಮಧುಸೂದನ್ ಛಾಯಾಗ್ರಹಣ ಹಾಗೂ ಶಕ್ತಿ ಅವರ ಸಂಗೀತ ನಿರ್ದೇಶನವಿದೆ.
ಈ ಸುದ್ದಿಯನ್ನೂ ಓದಿ | Deepavali Jewel Fashion 2025: ದೀಪಾವಳಿ ಸೀಸನ್‌ನಲ್ಲಿ ಬೇಡಿಕೆ ಹೆಚ್ಚಿಸಿಕೊಂಡ ಆಭರಣಗಳು
ಗ್ರೀನ್ ಒಂದು ಮನೋವೈಜ್ಞಾನಿಕ ಮನಸ್ಸನ್ನು ಬೆರಗುಗೊಳಿಸುವ ಥ್ರಿಲ್ಲರ್ ಚಿತ್ರವಾಗಿದ್ದು, ಇದು ವೀಕ್ಷಕರನ್ನು ಮಾನವ ಮನಸ್ಸಿನ ಆಳಕ್ಕೆ ಕರೆದೊಯ್ಯುತ್ತದೆ. ವಿಭಿನ್ನ ಕಥಾಹಂದರ ಹೊಂದಿರುವ ʼಗ್ರೀನ್ʼ ಚಿತ್ರಕ್ಕೆ ನಿರ್ದೇಶಕರೇ ಕಥೆ, ಚಿತ್ರಕಥೆ ಬರೆದಿದ್ದಾರೆ.