Guerrilla War Movie: ಓಂಪ್ರಕಾಶ್ ರಾವ್ ನಿರ್ದೇಶನದ 50ನೇ ಚಿತ್ರ ‘ಗೆರಿಲ್ಲಾ WAR’ ಪೋಸ್ಟರ್ ಬಿಡುಗಡೆ
Guerrilla War Movie: ಹಿರಿಯ ನಿರ್ದೇಶಕ ಓಂಪ್ರಕಾಶ್ ರಾವ್ ನಿರ್ದೇಶನದ ‘ಗೆರಿಲ್ಲಾ WAR’ ಚಿತ್ರಕ್ಕೆ ‘ಮಂಡ್ಯ ಸ್ಟಾರ್’ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿರುವ ‘ಮಂಡ್ಯ ಸ್ಟಾರ್’ ಲೋಕಿ ಎಂದೇ ಪ್ರಸಿದ್ಧರಾಗಿರುವ ಲೋಕೇಶ್ ನಾಯಕನಾಗಿ ನಟಿಸುತ್ತಿದ್ದಾರೆ. ಯುಗಾದಿ ಹಬ್ಬದ ದಿನದಂದು ಈ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ನಿರ್ದೇಶಕರು ತಮ್ಮ ನಿರ್ದೇಶನದ 50ನೇ ಚಿತ್ರದ ಘೋಷಣೆ ಮಾಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.


ಬೆಂಗಳೂರು: ‘AK 47’, ‘ಲಾಕಪ್ ಡೆತ್’, ‘ಕಲಾಸಿಪಾಳ್ಯ’, ‘ಹುಚ್ಚ’ ಸೇರಿದಂತೆ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಹಿರಿಯ ನಿರ್ದೇಶಕ ಓಂಪ್ರಕಾಶ್ ರಾವ್ ನಿರ್ದೇಶನದ 50ನೇ ಚಿತ್ರ ‘ಗೆರಿಲ್ಲಾ WAR’ (Guerrilla War Movie). ‘ಮಂಡ್ಯ ಸ್ಟಾರ್’ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿರುವ ‘ಮಂಡ್ಯ ಸ್ಟಾರ್’ ಲೋಕಿ ಎಂದೇ ಪ್ರಸಿದ್ಧರಾಗಿರುವ ಲೋಕೇಶ್ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ಯುಗಾದಿ ಹಬ್ಬದ ದಿನದಂದು ಈ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ನಿರ್ದೇಶಕರು ತಮ್ಮ ನಿರ್ದೇಶನದ 50ನೇ ಚಿತ್ರದ ಘೋಷಣೆ ಮಾಡಿದ್ದಾರೆ. ಗಂಗಮ್ಮ ಎಂಟರ್‌ಪ್ರೈಸಸ್ ಲಾಂಛನದಲ್ಲಿ ರಮೇಶ್ ಅಬ್ಬನಕುಪ್ಪೆ (ಬಿಡದಿ) ಹಾಗೂ ಸ್ನೇಹಿತರು ನಿರ್ಮಿಸುತ್ತಿರುವ ಈ ಚಿತ್ರವನ್ನು ಸಿ. ಮಾದೇಶ್ (AVVA) ಅವರು ಅರ್ಪಿಸುತ್ತಿದ್ದಾರೆ. ಓಂ ಪ್ರಕಾಶ್ ರಾವ್ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ದೀಪು ಪಿ.ಆರ್ ಸಂಭಾಷಣೆ ಬರೆಯುತ್ತಿದ್ದಾರೆ. ರವಿಕುಮಾರ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ರವಿವರ್ಮ ಸಾಹಸ ನಿರ್ದೇಶನ ಹಾಗೂ ಲಕ್ಷ್ಮಣ್ ರೆಡ್ಡಿ ಅವರ ಸಂಕಲನವಿದೆ.
ʼಗೆರಿಲ್ಲಾ WARʼ ಒಂದು ರೀತಿಯ ಯುದ್ಧವಾಗಿದ್ದು, ಅಲ್ಲಿ ಒಂದು ಸಣ್ಣ ಗುಂಪು ದೊಡ್ಡ ಸಂಖ್ಯೆಯ ಶತ್ರುಗಳೊಂದಿಗೆ ವ್ಯವಹರಿಸುವಾಗ ಅಸಾಂಪ್ರದಾಯಿಕ ತಂತ್ರಗಳನ್ನು ಬಳಸುತ್ತದೆ. ಹಿಂದೆ ಈ ರೀತಿಯ ಯುದ್ಧಗಳು ಆಗಿರುವ ಅನೇಕ ಉದಾಹರಣೆಗಳಿದೆ. ಹಾಗಂತ ನಮ್ಮದು ಐತಿಹಾಸಿಕ ಚಿತ್ರವಲ್ಲ. ಈ ವಿಷಯವನ್ನಿಟ್ಟುಕೊಂಡು ಈಗಿನ ಸಮಾಜದಲ್ಲಿ ಹೆಣ್ಣುಮಕ್ಕಳು ಎದುರಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ತೋರಿಸುವ ಪ್ರಯತ್ನ ಮಾಡಲಾಗುತ್ತಿದೆ. ಜೂನ್‌ನಿಂದ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ಓಂಪ್ರಕಾಶ್ ರಾವ್ ತಿಳಿಸಿದರು.
ಈ ಸುದ್ದಿಯನ್ನೂ ಓದಿ | Summer Fashion 2025: ಸೀಸನ್‌ಗೆ ಲಗ್ಗೆ ಇಟ್ಟ ಸಮ್ಮರ್ ಫ್ಯಾಷನ್!
ʼಮಂಡ್ಯ ಸ್ಟಾರ್ʼ ಲೋಕಿ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಅಚ್ಯುತಕುಮಾರ್, ರಂಗಾಯಣ ರಘು, ಸ್ವಸ್ತಿಕ್ ಶಂಕರ್, ಸುಧಾ ಬೆಳವಾಡಿ, ಚಿತ್ರಾ ಶೆಣೈ, ಪೂಜಾ ಗೌಡ ಮುಂತಾದವರು ತಾರಾಬಳಗದಲ್ಲಿದ್ದಾರೆ. ನಾಯಕಿ ಸೇರಿದಂತೆ ಚಿತ್ರದ ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ತಿಳಿಸಿದ್ದಾರೆ.